ಬೆಂಗಳೂರು: ರಾಜ್ಯಾದ್ಯಂತ ವೆಜ್ ಕಬಾಬ್, ಚಿಕನ್ ಹಾಗೂ ಮೀನಿನ ಕಬಾಬ್ ತಯಾರಿಕೆಗೆ ಕೃತಕ ಬಣ್ಣ ಬಳಸುವುದನ್ನು ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿಷೇಧಿಸಿದೆ.
ಈ ನಿಮಯವನ್ನು ಉಲ್ಲಂಘಿಸಿದರೆ ಕನಿಷ್ಠ 7 ವರ್ಷದಿಂದ ಜಿವಾವಧಿವರೆಗೆ ಜೈಲು ಶಿಕ್ಷೆ ಹಾಗೂ 10 ಲಕ್ಷದವರೆಗೆ ದಂಡ ವಿಧಿಸುವ ಎಚ್ಚರಿಕೆಯನ್ನು ನೀಡಲಾಗಿದೆ.
ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು. ಇದೇ ವೇಳೆ ಚಿಕನ್ ಕಬಾಬ್‌ಗಳಲ್ಲೂ ಕೃತಕ ಬಣ್ಣಗಳ ಬೆರಸುವಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು. ಪರೀಕ್ಷೆಯಲ್ಲಿ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ.
Post a comment
Log in to write reviews