ಬೆಂಗಳೂರಿಗರಿಗೆ ಬಿಡಬ್ಲ್ಯೂ ಎಸ್‌ಎಸ್‌ಬಿಯಿಂದ ಗುಡ್ ನ್ಯೂಸ್ ಸಿಕ್ಕಿದ್ದು, ದಶಕದ ಕನಸು ಕೊನೆಗೂ ನನಸಾಗಿದೆ. ಬೆಂಗಳೂರಿಗರಿಗೆ ಅನುಕೂಲವಾಗಲಿರುವ ಮಹತ್ವಾಕಾಂಕ್ಷೆ ಯೋಜನೆ 5ನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಲೋಕಾರ್ಪಣೆಗೊಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿಯ ಯೋಜನೆ ಇದಾಗಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲ ಶುದ್ದೀಕರಣ ಘಟಕದ ಆವರಣದಲ್ಲಿ ಅದ್ಧೂರಿ ಸಮಾರಂಭ ಏರ್ಪಡಿಸಲಾಗಿದ್ದು ಸಮೃದ್ದ ಬೆಂಗಳೂರು ಧ್ಯೇಯ ವಾಕ್ಯದ ಅಡಿಯಲ್ಲಿ ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಲಾಗಿದೆ.
ಜಪಾನ್ ಇಂಟರ್ನ್ಯಾಷನಲ್ ಕೋ ಆಪರೇಶನ್ ಏಜೆನ್ಸಿ ಜೈಕಾ ಸಂಸ್ಥೆಯ ಸಹಭಾಗಿತ್ವದಲ್ಲಿ 4336 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಈ ಯೋಜನೆಗೆ ನೀರು ಶುದ್ದೀಕರಣ ಘಟಕದ ಬಟನ್ ಪ್ರೆಸ್ ಮಾಡುವ ಮೂಲಕ ಚಾಲನೆ ನೀಡಲಾಯಿತು. ಬೆಂಗಳೂರಿಗೆ ಪ್ರತಿನಿತ್ಯ 2,250 ಎಂ.ಎಲ್.ಡಿ ಯಷ್ಟು ನೀರು ಬೇಕು. ಸದ್ಯ ಕೇವಲ 1450 ಎಂ.ಎಲ್.ಡಿ ಯಷ್ಟು ಮಾತ್ರ ಸರಬರಾಜು ಆಗ್ತಿದೆ. ಹೀಗಾಗಿ ಕಾವೇರಿ 5ನೇ ಹಂತ ಭಾರಿ ಅನಿವಾರ್ಯವಾಗಿತ್ತು. ಸದ್ಯ ಇದರಿಂದ 775 ಎಂ.ಎಲ್.ಡಿ ಯಷ್ಟು ನೀರನ್ನ ಸರಬರಾಜು ಮಾಡಬಹುದು.
Post a comment
Log in to write reviews