ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ಖಾಸಗಿ ಕಾಲೇಜುಗಳ ಪ್ರವೇಶ ಶುಲ್ಕ ಶೇಕಡಾ 10ರಿಂದ 15ರಷ್ಟು ಏರಿಕೆ ಮಾಡುವಂತೆ ಖಾಸಗಿ ಕಾಲೇಜುಗಳ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ.
ಸಿಇಟಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಈ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಹಾಗೂ ಕಾಮೆಡ್-ಕೆ ಕೋಟಾ ಸೀಟುಗಳ ಪ್ರವೇಶ ಶುಲ್ಕ ಶೇ.10ರಿಂದ 15ರಷ್ಟು ಏರಿಕೆಗೆ ಖಾಸಗಿ ಕಾಲೇಜುಗಳ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ. ಉತ್ತಮ ರ್ಯಾಂಕ್ ಪಡೆದ ವಿದ್ಯಾರ್ಥಿಗಳು ಸರ್ಕಾರಿ ಕೋಟಾದಲ್ಲಿ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಪಡೆಯಲು ಮುಂದಾಗಿದ್ದಾರೆ. ಆದರೆ ಉತ್ತಮ ರ್ಯಾಂಕ್ ಬಾರದ ವಿದ್ಯಾರ್ಥಿಗಳು ಖಾಸಗಿ ಸೀಟ್ ಕೋಟಾದಡಿ ಖಾಸಗಿ ಇಂಜನಿಯರಿಂಗ್ ಪ್ರವೇಶಾತಿಗೆ ಮುಂದಾಗಿದ್ದಾರೆ. ಈಗ ಈ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜುಗಳು ಶೇ. 20 ರಿಂದ 30ರಷ್ಟು ಶುಲ್ಕ ಹೆಚ್ಚಿಗೆ ಮಾಡಲು ಮುಂದಾಗಿವೆ. ಇದರಿಂದ ಬೆಂಗಳೂರಿನ ಪ್ರತಿಷ್ಠಿತ ಇಂಜನಿಯರಿಂಗ್ ಕಾಲೇಜಿನಲ್ಲಿ ಸೀಟ್ ಪಡೆಯಲು 6 ರಿಂದ 10 ಲಕ್ಷ ಶುಲ್ಕ ಕಟ್ಟಬೇಕಾದ ಸ್ಥಿತಿ ಎದುರಾಗಿದೆ. ಇದರ ನಡುವೆ ಸರ್ಕಾರಿ ಕೋಟಾದಡಿ ಈ ವರ್ಷ ಇಂಜಿನಿಯರಿಂಗ್ ಶುಲ್ಕ ಶೇ. 10-15ರಷ್ಟು ಏರಿಕೆಗೆ ಖಾಸಗಿ ಕಾಲೇಜುಗಳ ಸಂಘಟನೆಯಿಂದ ಸರ್ಕಾರಕ್ಕೆ ಒತ್ತಾಯ ಕೇಳಿ ಬಂದಿದೆ. ಇದರಿಂದಾಗಿ ಪೋಷಕರಿಗೆ ಭೀತಿ ಎದುರಾಗಿದೆ.
Post a comment
Log in to write reviews