ಹರಾರೆ: ಎರಡನೇ T20 ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಆರಂಭಿಕ ಅಭಿಷೇಕ್ ಶರ್ಮಾ ಸಿಡಿಸಿದ ಅಬ್ಬರದ ಶತಕದ ನೆರವಿನಿಂದ ಭಾರತ ತಂಡ 100 ರನ್‌ಗಳ ಭಾರೀ ಅಂತರದಿಂದ ಜಿಂಬಾಬ್ವೆ ತಂಡವನ್ನು ಸೋಲಿಸಿ T20 ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 234 ರನ್ ಗಳಿಸಿತ್ತು. ಈ ಗರಿಷ್ಠ ರನ್‌ಗಳ ಬೆನ್ನತ್ತಿದ ಜಿಂಬಾಬ್ವೆ ತಂಡ 18.4 ಓವರ್ಗಳಲ್ಲಿ 134 ರನ್‌ಗೆ ಆಲ್ ಔಟ್ ಆಗಿ ಭಾರತ ತಂಡದೆದುರು ಸೋಲೊಪ್ಪಿಕೊಂಡಿದೆ.
46 ಎಸೆತಗಳಲ್ಲಿ 100 ರನ್ ಅಭಿಷೇಕ್ ಶರ್ಮಾ ಮಿಂಚಿನ ಆಟ
ಅಭಿಷೇಕ್ ಶರ್ಮಾ ತಮ್ಮ ವೃತ್ತಿಜೀವನದ ಎರಡನೇ T20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮೊದಲ ಶತಕ ದಾಖಲಿಸಿದ್ದಾರೆ. ಕೇವಲ 46 ಎಸೆತಗಳಲ್ಲಿ 100 ರನ್ ಗಳಿಸಿದ ಅಭಿಷೇಕ್ ತಮ್ಮ ಈ ಅದ್ಭುತ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಮತ್ತು 8 ಸಿಕ್ಸರ್‌ಗಳನ್ನು ಹೊಡೆದರು. ಅಲ್ಲದೆ, ಶರ್ಮಾ ಎರಡನೇ ವಿಕೆಟ್‌ಗೆ ಗಾಯಕ್ವಾಡ್ ಅವರೊಂದಿಗೆ 137 ರನ್‌ಗಳ ಜೊತೆಯಾಟವನ್ನು ನಡೆಸಿದರು. ಇದರೊಂದಿಗೆ ಅಭಿಷೇಕ್ ಶರ್ಮಾ ಭಾರತದ ಪರ T20 ಅಂತಾರಾಷ್ಟ್ರೀಯ ಶತಕ ಸಿಡಿಸಿದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
Post a comment
Log in to write reviews