ಲೋಕಾಯುಕ್ತ ಎಸ್ಐಟಿ ಎಡಿಜಿಪಿ, ಹಿರಿಯ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ತಮ್ಮ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪಗಳ ಸುರಿಮಳೆ ಗೈದಿದ್ದರು. ಇದೀಗ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಹೆಚ್ಡಿಕೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡಿದ್ದಾರೆ. ನಿನ್ನೆ ದೂರವಾಣಿ ಮೂಲಕ ಹೆಚ್‌ಡಿಕೆ, ಅಮಿತ್ ಶಾ ಜೊತೆ ಚರ್ಚಿಸಿ, ಚಂದ್ರಶೇಖರ್ ವಿರುದ್ಧ ಗೃಹ ಇಲಾಖೆಯಿಂದ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಐಪಿಎಸ್ ಅಧಿಕಾರಿಯ (Ips officer) ಅಕ್ರಮಗಳ ಮಾಹಿತಿ ಸಂಗ್ರಹಿಸಿ ಎಲ್ಲಾ ಮಾಹಿತಿಯನ್ನೂ ಕೇಂದ್ರ ಗೃಹ ಸಚಿವರಿಗೆ ರವಾನಿಸಿದ್ದಾರಂತೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಅಮಿಶ್ ಶಾ, ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ
Post a comment
Log in to write reviews