Samayanews.

Samayanews.

2024-12-24 01:04:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಆಗಸ್ಟ್ ಅಂತ್ಯಕ್ಕೆ ‘ಕಾಂತಾರ: ಚಾಪ್ಟರ್ 1’ ನಾಲ್ಕನೇ ಹಂತದ ಶೂಟಿಂಗ್

ನಟ ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾ ಹಿಟ್ ಆದ ಬಳಿಕ ನಿರ್ದೇಶಕ, ‘ಕಾಂತಾರ: ಚಾಪ್ಟರ್ 1’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡರು. ಈ ಸಿನಿಮಾ ಬಗ್ಗೆ ಫ್ಯಾನ್ಸ್  ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾಗೆ ಸದ್ದಿಲ್ಲದೆ ಶೂಟಿಂಗ್ ನಡೆಯುತ್ತಿದೆ.

ರಿಷಬ್ ಅವರು ಉದ್ದ ಕೂದಲು ಹಾಗೂ ಗಡ್ಡ ಬಿಟ್ಟು ಕಾಣಿಸಿಕೊಳ್ಳಬಹುದು ಎಂಬುದು ಅವರ ಲುಕ್​ನಿಂದಲೇ ರಿವೀಲ್ ಆಗಿದೆ. ಈಗ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್ ಶೀಘ್ರವೇ ಆರಂಭ ಆಗಲಿದೆ. ರಿಷಬ್ ಶೆಟ್ಟಿ ಅವರು ‘ಕಾಂತಾರ’ ಮುಗಿದ ಬಳಿಕ ಹೊಸ ಸಿನಿಮಾ ಘೋಷಣೆ ಮಾಡಲು ಸಾಕಷ್ಟು ಸಮಯ ತೆಗೆದುಕೊಂಡರು. ಅವರು ಸ್ಕ್ರಿಪ್ಟ್ ಕೆಲಸದಲ್ಲಿ ತೊಡಗಿಕೊಂಡಿದ್ದರು. ಆ ಬಳಿಕ ಕುಂದಾಪುರದಲ್ಲಿ ಸೆಟ್ ಹಾಕಿ ಸೈಲೆಂಟ್ ಆಗಿ ಶೂಟಿಂಗ್ ಮಾಡುತ್ತಿದ್ದಾರೆ. ಈ ಸಿನಿಮಾಗೆ ನಾಲ್ಕನೇ ಹಂತದ ಶೂಟಿಂಗ್ ಶೀಘ್ರವೇ ಆರಂಭ ಆಗಲಿದೆ.

ಆಗಸ್ಟ್ ಅಂತ್ಯದ ವೇಳೆಗೆ ನಾಲ್ಕನೇ ಹಂತದ ಶೂಟ್​ ಆರಂಭ ಆಗಲಿದೆ. ಭರ್ಜರಿ ಆ್ಯಕ್ಷನ್ ದೃಶ್ಯಗಳನ್ನು ಶೂಟ್ ಮಾಡಲು ಪ್ಲ್ಯಾನಿಂಗ್ ನಡೆದಿದೆ. ಈ ಸಿನಿಮಾಗೆ ಶೂಟಿಂಗ್ ಕೊನೆಯ ಹಂತ ತಲುಪಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಸಿನಿಮಾ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ‘ಕಾಂತಾರ’ದ ಪ್ರೀಕ್ವೆಲ್. ರಿಷಬ್ ಶೆಟ್ಟಿ ಅವರು ನಟಿಸಿ, ನಿರ್ದೇಶಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಅವರು ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

 

img
Author

Post a comment

No Reviews