ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿಯ ಜೀವಮಾನ ಸಾಧನೆ ಪ್ರಶಸ್ತಿಯನ್ನು ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಸೇರಿದಂತೆ ಮೂವರಿಗೆ ನೀಡಲಾಗುತ್ತಿದೆ. ಅಲ್ಲದೆ 75 ವಾರ್ಷಿಕ ಪ್ರಶಸ್ತಿಗಳು ಮತ್ತು 15 ದತ್ತಿನಿಧಿ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಕೆ.ವಿ ನಾಗರಾಜ ಮೂರ್ತಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ವೃತ್ತಿರಂಗಭೂಮಿಯ 30ಕ್ಕೂ ಹೆಚ್ಚು ಕಲಾವಿದರನ್ನು ವಾರ್ಷಿಕ ಪ್ರಶಸ್ತಿ ಮತ್ತು ದತ್ತಿನಿ„ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದರು. 2022, 2023 ಮತ್ತು 2024ನೇ ಸಾಲಿನ ಅಕಾಡೆಮಿಯ ಗೌರವ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ, ದತ್ತಿನಿ„ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಶಸ್ತಿಗೆ ಗಣ್ಯರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಕರ್ನಾಟಕ ನಾಟಕ ಅಕಾಡೆಮಿ ಪುನರ್ ರಚನೆಯಾಗಿದ್ದು, 2024-25ನೇ ಸಾಲಿಗೆ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿದೆ. ಭಾರತೀಯ ರಂಗಭೂಮಿಯಲ್ಲಿಯೇ ಅತ್ಯಂತ ಕ್ರಿಯಾಶೀಲವಾಗಿರುವ ಕನ್ನಡ ರಂಗಭೂಮಿ ಕಳೆದ 5 ದಶಕಗಳಲ್ಲಿ ಸಾ„ಸಿರುವ ಯಶಸ್ಸು ಅತ್ಯಂತ ಮಹತ್ತರವಾದುದು. ಈಗಾಗಲೇ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ತನ್ನದೇ ಆದ ಮಹತ್ತರವಾದ ಕೊಡುಗೆಗಳ ಮೂಲಕ ಶ್ರೀಮಂತವಾಗಿರುವ ರಂಗಭೂಮಿಗೆ ಕೊಡುಗೆ ಕೊಟ್ಟವರನ್ನು ಗುರುತಿಸಿ, ಕರ್ನಾಟಕ ಸರ್ಕಾರ ನಾಟಕ ಅಕಾಡೆಮಿಯ ಮೂಲಕ ಪ್ರತಿವರ್ಷ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತಿದೆ ಎಂದರು.
ಈ ನಿಟ್ಟಿನಲ್ಲಿ ಪ್ರಸ್ತುತ 2022-23, 2023-24 ಮತ್ತು 2024-25ನೇ ಸಾಲಿನ ಪ್ರಶಸ್ತಿಗಳನ್ನು ನೀಡಬೇಕಾಗಿದ್ದು, ಆಗಸ್ಟ್.3ರಂದು ನಡೆದ ಅಕಾಡೆಮಿಯ ಸರ್ವಸದಸ್ಯರ ಸಭೆಯಲ್ಲಿ ಕಲಾವಿದರನ್ನು ಮತ್ತು ನಾಟಕಕಾರರನ್ನು ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಿದೆ. ವರ್ಷದ ಪ್ರಶಸ್ತಿಗಳನ್ನು ಬಹುತೇಕ ಎಲ್ಲಾ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗಿದ್ದು, ಸಾಮಾಜಿಕ ನ್ಯಾಯ ಮತ್ತು ಜಿಲ್ಲಾವಾರುಗಳಿಗೆ ಅನ್ವಯವಾಗುವಂತೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ವಿಶೇಷವಾಗಿ ಈ ಸಾಲಿನಲ್ಲಿ ಯುವಪ್ರಶಸ್ತಿ ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರಶಸ್ತಿಗೆ ಆಯ್ಕೆ ಮಾಡುತ್ತಿರುವುದು ವಿಶೇಷವಾಗಿದೆ ಎಂದು ಹೇಳಿದರು.
ಈ ಮೂರು ವರ್ಷಗಳಿಗೆ 3 ಕಲಾವಿದರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, 2022ನೇ ಸಾಲಿಗೆ ಪ್ರಖ್ಯಾತ ನಟಿ ಉಮಾಶ್ರೀ, 2023ನೇ ಸಾಲಿಗೆ ನಾಟಕಕಾರ ಹೆಚ್.ಎಸ್.ಶಿವಪ್ರಕಾಶ್ ಹಾಗೂ 2024ನೇ ಸಾಲಿಗೆ ಪ್ರಸಿದ್ಧ ರಂಗಸಂಘಟಕ, ನಾಟಕಕಾರ ಮತ್ತು ಕೋಲಾರದ ಆದಿಮ ಸಾಂಸ್ಕೃತಿಕ ಪ್ರತಿಷ್ಠಾನದ ರೂವಾರಿ ಕೆ.ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಹಾಗೆಯೇ ವಾರ್ಷಿಕ ಪ್ರಶಸ್ತಿಗಳಲ್ಲಿಯೂ ನಾಡಿನ ವಿವಿಧ ಜಿಲ್ಲೆಗಳ ಅತ್ಯುತ್ತಮ ಕಲಾವಿದರ ಜೊತೆಗೆ ಈಗಾಗಲೇ ಸಾಂಸ್ಕೃತಿಕ ಕ್ಷೇತ್ರದಲ್ಲಿ ಹೆಸರು ಮಾಡಿರುವ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಪ್ರಕಾಶ್ ರೈ, ಬಿ.ಸುರೇಶ್, ಅಚ್ಯುತ ಕುಮಾರ್, ರಮೇಶ್ ಪಂಡಿತ್ ಮತ್ತು ಮಕ್ಕಳ ರಂಗಭೂಮಿಯ ನಾಟಕಕಾರರಾದ ಡಾ. ಲಕ್ಷ್ಮಿಪರಿ ಕೋಲಾರ ಮುಂತಾದವರು ವಾರ್ಷಿಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ ಎಂದರು. ರಘುನಂದನ್, ರಾಜಗುರು ಹೊಸಕೋಟಿ. ಯುವ ಪ್ರಶಸ್ತಿಗೆ ಡಾಲೇಟೂರ, ರಂಗಭೂಮಿಯ ಪ್ರಸಿದ್ಧ ಸಂಘಟಕ ಹಾಗೂ ರಂಗಸ್ವಾಮಿ ಜಿ. ಅವರನ್ನು ಆಯ್ಕೆ ಮಾಡಲಾಗಿದೆ.
ಹೊರನಾಡ ಕಲಾವಿದರಲ್ಲಿ ಮುಂಬೈನ ಪ್ರಸಿದ್ಧ ರಂಗನಿರ್ದೇಶಕಿ ಕನ್ನಡತಿ ನಂದಿತಾ ಯಾದವ್ ಮತ್ತು ಪಾಂಡಿಚೇರಿ ವಿಶ್ವವಿದ್ಯಾನಿಲಯದ ರಂಗತಜ್ಞೆ ಪ್ರಾಧ್ಯಾಪಕಿ ಡಾ. ಪವಿತ್ರಾ ಅವರನ್ನು ಆಯ್ಕೆ ಮಾಡಿರುವುದಾಗಿ ಅವರು ತಿಳಿಸಿದರು.
Post a comment
Log in to write reviews