Samayanews.

Samayanews.

2025-01-14 06:17:43

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕುಮಾರಸ್ವಾಮಿ ಸಹಿ ಫೋರ್ಜರಿ ಕೇಸ್‌ - ಸಿಬಿಐ ತನಿಖೆಗೆ ಮನವಿ

ಬೆಂಗಳೂರು: ರಾಜ್ಯದ ರಾಜಕೀಯದಲ್ಲಿ ಮುಡಾ ಹಗರಣದ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಸಾವಿರಾರು ಕೋಟಿ ಮೌಲ್ಯದ ಜಮೀನನ್ನು ಮಾಜಿ ಮುಖ್ಯಮಂತ್ರಿ ಸಹಿ ಫೋರ್ಜರಿ ಮಾಡುವ ಮೂಲಕ ಅಧಿಕಾರಿಗಳು ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. 
ಈ ಕುರಿತು ಸಿಬಿಐ ತನಿಖೆಗೆ ಹೈಕೋರ್ಟ್ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಸಿಟಿಜನ್ ರೈಟ್ಸ್ ಫೌಂಡೇಶನ್ ರಾಜ್ಯಪಾಲರಿಗೆ ದೂರು ನೀಡಿದೆ. ಈ ಬಗ್ಗೆ ಉನ್ನತಮಟ್ಟದ ತನಿಖೆಗೆ ನಿರ್ದೇಶಿಸಲು ಕೋರಿ ಮನವಿ ಸಲ್ಲಿಸಿದೆ.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾಯಿ ವೆಂಕಟೇಶ್ವರ ಮಿನರಲ್ಸ್'ಗೆ ಅಕ್ರಮವಾಗಿ ಗಣಿ ಗುತ್ತಿಗೆ ನೀಡಿರುವ ಆರೋಪಗಳು ಕೇಳಿಬಂದಿದ್ದು, ಈ ಪ್ರಕರಣದಲ್ಲಿ ತಮ್ಮ ತಪ್ಪಿಲ್ಲ ಎಂದು ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಆ.8ರಂದು ಸುದ್ದಿಗೋಷ್ಠಿ ನಡೆಸಿದ್ದ ಕುಮಾರಸ್ವಾಮಿ, ಸದರಿ ಕಡತಗಳಿಗೆ ನಾನು ಸಹಿ ಮಾಡಿಲ್ಲ, ಅಧಿಕಾರಿಗಳೇ ನನ್ನ ಸಹಿ ಮಾಡಿರಬೇಕು ಎಂದು ಸಂಶಯ ವ್ಯಕ್ತಪಡಿಸಿದ್ದರು.

img
Author

Post a comment

No Reviews