ಪ್ರಜ್ವಲ್ ರೇವಣ್ಣ ಪ್ರಕರಣ ಡೈವರ್ಟ್ ಮಾಡಲು ಕುಮಾರಸ್ವಾಮಿ ಡಿಕೆಶಿ ಹೆಸರು ಬಳಸುತಿದ್ದಾರೆ : ಸಿಎಂ
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂರನ್ನ ತನಿಖೆಗೆ ಒಳಪಡಿಸಬೇಕು ಎಂಬ ಹೇಳಿಕೆಗೆ ಸಿಎಂ ತಿರುಗೇಟು ನೀಡಿದ್ದಾರೆ. ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಸಿಎಂ ಡಿಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್, ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪ ಇದೆ. ಕುಮಾರಸ್ವಾಮಿ ವಿಚಾರವನ್ನು ಡೈವರ್ಟ್ ಮಾಡಲು ಡಿಕೆಶಿ ಹೆಸರು ತಗೆಯುತ್ತಿದ್ದಾರೆ. ಪ್ರಜ್ವಲ್ ಕೇವಲ ಆರೋಪಿ ಅಪರಾಧಿಯಲ್ಲ ಅಂತ ಹೇಳುತ್ತಿದ್ದಾರೆ. ನಾನೂ ಕೂಡ ಅದನ್ನೇ ಹೇಳುತಿದ್ದೇನೆ. ಪ್ರಜ್ವಲ್ ರೇವಣ್ಣ ಆರೋಪಿ ಅಷ್ಟೇ. ಪ್ರಜ್ವಲ್ ವಿಚಾರ ಅವರ ಕುಟುಂಬಕ್ಕೆ ಎಲ್ಲವೂ ತಿಳಿದಿದೆ. ಕುಮಾರಸ್ವಾಮಿ ಪ್ರಜ್ವಲ್ ಪರ ಪ್ರಚಾರಕ್ಕೆ ಹೋದಾಗ ನನ್ನ ಮಗ ಎಂದು ಹೇಳಿದ್ದರು. ದೇವೇಗೌಡರು ಹಾಗೂ ಅವರ ಮನೆಯವರಿಗೆ ಗೊತ್ತಿಲ್ಲದೇ ಪ್ರಜ್ವಲ್ ಮನೆಯಿಂದ ಹೋಗಲು ಸಾಧ್ಯವೇ..? ಕುಟುಂಬದವರ ಸಂಪರ್ಕದಲ್ಲಿ ಪ್ರಜ್ವಲ್ ಇಲ್ಲಾ ಅಂದರೆ ನಂಬಬಹುದಾ..? ಎಂದು ಪ್ರತಿಕ್ರಿಯಿಸಿದ್ದಾರೆ.
ಇನ್ನು ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಒಂದಲ್ಲ, ಎರಡು ಬಾರಿ ಪ್ರಧಾನಿಗೆ ಪತ್ರ ಬರೆದಿದ್ದೇನೆ. ಈವರಗೆ ಯಾವುದೇ ಉತ್ತರ ಬಂದಿಲ್ಲ. ಪ್ರಧಾನಿ ಕಚೇರಿಗೆ ಪತ್ರ ಬರೆದರೆ ಉತ್ತರ ಬಂದೇ ಬರುತ್ತದೆ ಎನ್ನುವ ಅಭಿಪ್ರಾಯ ನಿಮ್ಮ ತಪ್ಪು ತಿಳುವಳಿಕೆ. ಹಾಗಂತ ಪ್ರಧಾನಿ ಮೋದಿ ಸೆಲೆಕ್ಟಿವ್ ಆಗಿದ್ದಾರೆ ಅಂತ ನಾನು ಹೇಳಲ್ಲ. ಒಬ್ಬ ಸಿಎಂ ಆಡಳಿತ ಪಕ್ಷ ಪ್ರಧಾನಿಗೆ ಪತ್ರ ಬರೆದರೆ ಉತ್ತರ ಕೊಡಬೇಕಿತ್ತು. ಆದರೆ ಇದುವರೆಗೂ ನಮಗೆ ಉತ್ತರ ಬಂದಿಲ್ಲ. ಯಾಕೆ ಕೊಟ್ಟಿಲ್ಲ ಎಂದು ನೀವು ಬಿಜೆಪಿಯ ಪ್ರಹ್ಲಾದ್ ಜೋಶಿಯನ್ನು ಕೇಳಿ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟರು.
Post a comment
Log in to write reviews