ಬಿಹಾರ: ಭೂ ವಿವಾದಕ್ಕೆ ಸಂಬಂಧಿಸಿದಂತೆ ನವಾಡದಲ್ಲಿ (Nawada)ಸುಮಾರು 21 ದಲಿತರ ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾಂಝಿ ತೋಲಾದಲ್ಲಿ ನಡೆದಿದೆ.
ಪರಿಸ್ಥಿತಿ ಪರಿಶೀಲಿಸಲು ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಭೇಟಿ ನೀಡುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar)ಆದೇಶಿಸಿದ್ದಾರೆ. ಒಂದರ ಹಿಂದೆ ಒಂದರಂತೆ ದುಷ್ಕರ್ಮಿಗಳು ಮನೆಗಳಿಗೆ ಬೆಂಕಿ ಹಚ್ಚಲು ಮುಂದಾದಾಗ ಗಾಳಿಯಲ್ಲಿ ಗುಂಡು ಹಾರಿಸಲಾಯಿತು.
ಇದುವರೆಗೆ ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ 15 ಮಂದಿಯನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.
“ಮಾಂಜಿ ತೋಲಾದಲ್ಲಿ ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು, ವಿಷಯ ತಿಳಿದ ತಕ್ಷಣ ಪೊಲೀಸರು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಬೆಂಕಿ ನಂದಿಸಲು ಸ್ವಲ್ಪ ಸಮಯ ಹಿಡಿಯಿತು. ಗ್ರಾಮಸ್ಥರ ಪ್ರಕಾರ, ರಾತ್ರಿ 7 ಗಂಟೆ ಸುಮಾರಿಗೆ ಜನರ ಗುಂಪು ಮನೆಗಳಿಗೆ ಬೆಂಕಿ ಹಚ್ಚಲು ಪ್ರಾರಂಭಿಸಿತು ಎಂದು ಅಲ್ಲಿಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಧಿಮಾನ್ ಹೇಳಿದ್ದಾರೆ.
ನಿರಾಶ್ರಿತರಿಗೆ ಆಹಾರ ಪೊಟ್ಟಣ, ಕುಡಿಯುವ ನೀರು ಸೇರಿದಂತೆ ಪರಿಹಾರ ಸಾಮಗ್ರಿಗಳನ್ನು ನೀಡುತ್ತಿದ್ದೇವೆ. ಸಂತ್ರಸ್ತರಿಗಾಗಿ ತಾತ್ಕಾಲಿಕ ಡೇರೆಗಳನ್ನು ಸ್ಥಾಪಿಸಲಾಗಿದೆ” ಎಂದು ನವಾಡ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಶುತೋಷ್ ಕುಮಾರ್ ವರ್ಮಾ ಹೇಳಿದರು. ಅದೇ ವೇಳೆ ಜಾನುವಾರುಗಳನ್ನು ಸುಟ್ಟುಹಾಕಿದ್ದಾರೆ ಎಂಬ ಹೇಳಿಕೆಯನ್ನು ನಿರಾಕರಿಸಿದ ವರ್ಮಾ “ಅದನ್ನು ಬೆಂಬಲಿಸಲು ಯಾವುದೇ ಪುರಾವೆಗಳು ಕಂಡುಬಂದಿಲ್ಲ” ಎಂದಿದ್ದಾರೆ.
Post a comment
Log in to write reviews