Samayanews.

Samayanews.

2024-11-14 10:43:41

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಇಸ್ರೇಲ್​ ದಾಳಿಗೆ ಲೆಬನಾನ್​​ನ ಶಾಲೆಗಳು ಬಂದ್​

ಬೈರುತ್: ಇಸ್ರೇಲ್​ ಗಾಜಾದಂತೆ ಲೆಬನಾನ್​ನಲ್ಲಿ ವಿಧ್ವಂಸಕಗಳನ್ನು ಸೃಷ್ಟಿಸುತ್ತಿದ್ದು, ಯಹೂದಿ ರಾಷ್ಟ್ರವು ಹಿಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿಕೊಂಡು  ಬಾಂಬ್​, ಕ್ಷಿಪಣಿ ದಾಳಿಗಳನ್ನು ಹೆಚ್ಚಿಸಿದೆ. ಕಳೆದ ಮೂರು ವಾರಗಳಲ್ಲಿ 4 ಲಕ್ಷಕ್ಕೂ ಅಧಿಕ ಮಕ್ಕಳನ್ನು ಸ್ಥಳಾಂತರಿಸಲಾಗಿದ್ದು, ಇದರಿಂದ ಅಲ್ಲಿನ ಜನಜೀವನವೂ ಅಸ್ತವ್ಯಸ್ತಗೊಂಡಿದೆ.  
1.2 ಮಿಲಿಯನ್​ ಕುಟುಂಬಗಳು ಆಶ್ರಯ ತಾಣ ಸೇರಿದ್ದಾರೆ. ಇದರಲ್ಲಿ 4 ಲಕ್ಷಕ್ಕೂ ಅಧಿಕ ಮಕ್ಕಳಿದ್ದಾರೆ ಎಂದು ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಮಕ್ಕಳ ತುರ್ತು ನಿಧಿ (UNICEF) ಅಧಿಕಾರಿಗಳು ತಿಳಿಸಿದ್ದಾರೆ.

ಅದರ ನಿರ್ದೇಶಕ ಟೆಡ್ ಚೈಬನ್ ಅವರು ಆಶ್ರಯ ತಾಣಗಳಿಗೆ ಭೇಟಿ ನೀಡಿದ್ದು, ಅಲ್ಲಿನ ಪರಿಸ್ಥಿತಿಯ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ. 1.2 ಮಿಲಿಯನ್ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸಾರ್ವಜನಿಕ ಶಾಲೆಗಳು ಬಂದ್​ ಆಗಿವೆ. ಹಲವು ಶಿಕ್ಷಣ ಸಂಸ್ಥೆಗಳೂ ಹಾನಿಗೊಳಗಾಗಿದ್ದು, ಇದರಿಂದ ಅನೇಕ ಮಕ್ಕಳ ಮೇಲೆ ಪರಿಣಾಮ ಬೀರಿದೆ. ಅದರಲ್ಲೂ ಇಲ್ಲಿನ ವಲಸಿಗರಾದ ಪ್ಯಾಲೆಸ್ಟೈನ್​​, ಸಿರಿಯಾ ಕುಟುಂಬಗಳು ಹೆಚ್ಚು ನಷ್ಟ ಅನುಭವಿಸುತ್ತಿವೆ ಎಂದು ಹೇಳಿದ್ದಾರೆ.
ಆರೋಗ್ಯ ಸಚಿವಾಲಯದ ಪ್ರಕಾರ, ಲೆಬನಾನ್‌ನಲ್ಲಿ 2,300 ಕ್ಕೂ ಹೆಚ್ಚು ಜನರು ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಅದರಲ್ಲಿ 100 ಕ್ಕೂ ಹೆಚ್ಚು ಮಕ್ಕಳಿದ್ದಾರೆ. 800 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಥಳಾಂತರಗೊಂಡ ಮಕ್ಕಳನ್ನು ಚಿಕ್ಕದಾದ ಆಶ್ರಯ ತಾಣಗಳಲ್ಲಿ ಕಿಕ್ಕಿರಿದು ತುಂಬಲಾಗಿದೆ. 1 ಸಾವಿರ ಜನರಿಗೆ 12 ಶೌಚಾಲಯಗಳು ಮಾತ್ರ ಇವೆ. ಅನೇಕ ಕುಟುಂಬಗಳು ರಸ್ತೆಗಳ ಉದ್ದಕ್ಕೂ ಅಥವಾ ಕಡಲತೀರಗಳಲ್ಲಿ ಡೇರೆಗಳನ್ನು ಹಾಕಿಕೊಂಡು ಜೀವನ ನಡೆಸುವಂತಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ದಾಳಿಯ ಪರಿಣಾಮದಿಂದ 100 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳು ಬಾಗಿಲು ಹಾಕಿವೆ. 26 ನೀರಿನ ಕೇಂದ್ರಗಳು ಹಾನಿಗೊಳಗಾಗಿವೆ. ಜನರ ಅಗತ್ಯಗಳಾದ ಮೂಲಸೌಕರ್ಯಗಳನ್ನು ರಕ್ಷಿಸಬೇಕು. ಲೆಬನಾನ್ ಮತ್ತು ಗಾಜಾದಲ್ಲಿ ಕದನ ವಿರಾಮ ನೀಡಬೇಕು. ವಿವಾದಗಳನ್ನು ಸೇನಾ ಸಂಘರ್ಷದ ಮೂಲಕ ಪರಿಹರಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

img
Author

Post a comment

No Reviews