ಮೈಸೂರು ಅರಮನೆ ಮುಂದೆ ಪಾರಿವಾಳಗಳಿಗೆ ಧಾನ್ಯ ಚೆಲ್ಲುವುದನ್ನು ನಿಷೇಧಿಸಬೇಕು. ಇದರಿಂದ ಅರಮನೆಯ ಸೌಂದರ್ಯ ಹಾಗೂ ಅಸ್ತಿತ್ವಕ್ಕೆ ಧಕ್ಕೆಯಾಗುತ್ತಿರುವುದನ್ನು ತಪ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಆರ್.ರಘು (ಕೌಟಿಲ್ಯರಘು) ಪತ್ರ ಬರೆದಿದ್ದಾರೆ.
ಅರಮನೆಯ ಅಂದಗೆಡುತ್ತಿದೆ, ಆವರಣ ಕಲುಷಿತವಾಗಿದೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ದ್ವಾರದ ಮುಂಭಾಗ ಕೆಲವರು ಪಾರಿವಾಳಗಳಿಗೆ ನಿತ್ಯ ಧಾನ್ಯಗಳನ್ನು ತಂದು ಸುರಿಯುತ್ತಿದ್ದಾರೆ. ನೂರಾರು ಸಂಖ್ಯೆಯಲ್ಲಿ ಹಾರಿ ಬರುವ ಪಾರಿವಾಳಗಳು ಅರಮನೆಯ ಅಂದಗೆಡಿಸುತ್ತಿವೆ.
ನಾಲ್ವಡಿಯವರ ತಂದೆ ಮಹಾರಾಜ ಹತ್ತನೇ ಚಾಮರಾಜೇಂದ್ರ ಒಡೆಯರ್ ಪ್ರತಿಮೆ ಹಾಗೂ ಅದರ ಆವರಣ ಸಂಪೂರ್ಣ ತ್ಯಾಜ್ಯಗಳಿಂದ ಕಲುಷಿತಗೊಂಡಿದೆ. ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ಚಾರಿತ್ರಿಕ ಕೊಡುಗೆಗಳನ್ನು ನೀಡಿದ ಅವರನ್ನು ನಿತ್ಯವೂ ಅಪಮಾನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
Tags:
- India News
- Kannada News
- mysore palace
- karnataka
- mysore palace karnataka
- palace
- karnataka tourism
- mysuru palace
- bangalore palace
- karnataka news
- ambavilas palace
- historical palace
- mysore palace in karnataka
- mysore palace inside
- mysore palace history
- mysore palace lighting
- mysore maharaja palace
- mysore palace inside video
- karnataka mysore palace video 2023
- mysore palace inside videos
Post a comment
Log in to write reviews