Samayanews.

Samayanews.

2024-12-24 12:55:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವರುಣಾರ್ಭಟಕ್ಕೆ ಬದುಕು ಅತಂತ್ರ

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ನಿರೀಕ್ಷೆಗೂ ಮೀರಿ ಅಬ್ಬರಿಸುತ್ತಿದ್ದು, ಬಹುತೇಕ ಜಿಲ್ಲೆಗಳು ವರುಣನ ಆರ್ಭಟಕ್ಕೆ ಅಕ್ಷರಶಃ ತತ್ತರಿಸಿವೆ. 
ಕಳೆದ ಎಂಟು ಹತ್ತು ದಿನಗಳಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಸುರಿಯುತ್ತಿದ್ದ ಕುಂಭದ್ರೋಣ ಮಳೆ ಈಗ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ವ್ಯಾಪಿಸಿದೆ. ಎಲ್ಲೆಡೆ ನದಿ-ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು-ಸೇತುವೆಗಳು ಕೊಚ್ಚಿಹೋಗುವೆ. ವಿದ್ಯುತ್‌ ಕಂಬಗಳು, ಮರಗಳು ಧರೆಗುರುಳಿವೆ. ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತವಾಗಿದೆ. ತಗ್ಗು ಪ್ರದೇಶಗಳು ನಡುಗುಡ್ಡೆಗಳಾಗಿ ಮಾರ್ಪಟ್ಟಿದ್ದು, ನಿವಾಸಿಗಳ ಬದುಕು ಅತಂತ್ರವಾಗಿದೆ.
ಈ ಮಧ್ಯೆ, ಮತ್ತಷ್ಟು ದಿನ ಮಳೆ ಮುಂದುವರಿಯುವುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಸುರಕ್ಷಣೆಗಾಗಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮಂಗಳವಾರ (ಜುಲೈ16)ರಂದು ರಜೆ ಘೋಷಿಸಲಾಗಿದೆ.

img
Author

Post a comment

No Reviews