ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕೇಳಿ ಬಂದಿರುವ ಡಿನೋಟಿಫಿಕೇಷನ್ ಹಗರಣ ಆರೋಪ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇದೀಗ ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ಸಮನ್ಸ್ ಜಾರಿಗೊಳಿಸಿದೆ.
ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆಗೂ ಹೆಚ್ಚು ಗುಂಟೆ ಭೂಮಿಯನ್ನು ಸತ್ತವರ ಹೆಸರಲ್ಲಿ ಕುಮಾರಸ್ವಾಮಿ ಹಾಗೂ ಬಿಎಸ್ವೈ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿಸಿದ್ದರು ಎಂಬ ಆರೋಪವಿದೆ. 2007ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ, ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ IAS ಅಧಿಕಾರಿ ರಾಕೇಶ್ ಸಿಂಗ್ ಅವರಿಂದ ನಿಯಮ 164ರಡಿ ಲೋಕಾಯುಕ್ತ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ಪಡೆದುಕೊಂಡಿದ್ದರು.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಿಎಸ್ವೈ ಇಬ್ಬರೂ ನಾಯಕರು ಜಂಟಿಯಾಗಿ ಡಿನೋಟಿಫಿಕೇಷನ್ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪವಿದೆ. ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು A1 ಆರೋಪಿಯನ್ನಾಗಿ ಮಾಡಲಾಗಿದೆ.
Post a comment
Log in to write reviews