ಬೆಂಗಳೂರು: ರಾಜ್ಯದ ಎಂಟನೇ ವಂದೇ ಭಾರತ್ ರೈಲು ಮಧುರೈ- ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ಯಿಂದ ಬೆಂಗಳೂರಿಗೆ ಮೊದಲ ಪ್ರಾಯೋಗಿಕ ಸಂಚಾರ ನಡೆಸಿತು.
ಸೋಮವಾರ ಬೆಳಗ್ಗೆ 5.15ಕ್ಕೆ ಮಧುರೈ ನಿಲ್ದಾಣದಿಂದ ಹೊರಟು ಬೆಂಗಳೂರನ್ನು ಮಧ್ಯಾಹ್ನ 2 ಗಂಟೆ ಸುಮಾರಿಗೆ ತಲುಪಿ ಪುನಃ ತೆರಳಿತು. ಎರಡು ನಗರಗಳನ್ನು ಸರಿಸುಮಾರು 6 ಗಂಟೆಗಳಲ್ಲಿ ಕ್ರಮಿಸುವ ನಿರೀಕ್ಷೆಯಿದೆ.
ರೈಲಿನ ವೇಗ, ನಿಲುಗಡೆ ನಿಲ್ದಾಣ ನಿಗದಿ ಬಳಿಕ ರೈಲಿನ ವೇಳಾಪಟ್ಟಿ, ದರವನ್ನು ಪ್ರಕಟಿಸಿ, ವಾಣಿಜ್ಯ ಸಂಚಾರದ ದಿನಾಂಕ ಘೋಷಣೆ ಮಾಡಲಾಗುತ್ತದೆ. ಪ್ರಾಥಮಿಕ ಮಾಹಿತಿಯಂತೆ ಈ ವಂದೇ ಭಾರತ್ ರೈಲು ದಿಂಡಿಗಲ್, ಕರೂರ್, ಸೇಲಂ, ಧರ್ಮಪುರಿ ಮತ್ತು ಹೊಸೂರು ನಿಲ್ದಾಣದಲ್ಲಿ ನಿಲುಗಡೆ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದರು.
Post a comment
Log in to write reviews