ಚಾಮರಾಜನಗರ: ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ 30 ದಿನಗಳ ಅವಧಿಯಲ್ಲಿ 2.20 ಕೋಟಿ ರೂಪಾಯಿ ಸಂಗ್ರಹವಾಗಿದೆ.
ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,20,97,533 ರೂಪಾಯಿ ನಗದು 106 ಗ್ರಾಂ ಚಿನ್ನ ಹಾಗೂ 2.1000 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಅಷ್ಟೇ ಅಲ್ಲದೆ, 3,38,830 ವಿದೇಶಿ ನೋಟುಗಳು ಡಾಲರ್ 3, ಅದರಲ್ಲಿ ಅರಬ್ ದೇಶದ್ದು 1, ನೇಪಾಳದ್ದು 1, ಉಮನ್ ದೇಶದ 1 ಒಟ್ಟು 6 ಹುಂಡಿಯಲ್ಲಿ ಪತ್ತೆಯಾಗಿವೆ. ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2,000 ಮುಖಬೆಲೆಯ 19 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ. ಈ ವೇಳೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾ ಅಧೀಕ್ಷಕ ನಾಗೇಶ್, ಜಿಲ್ಲಾಡಳಿತ ಕಚೇರಿ ಮುಜರಾಯಿ ಶಾಖೆಯ ಶ್ವೇತ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
Post a comment
Log in to write reviews