ವಿಮಾನದಲ್ಲಿ ಪ್ರಯಾಣಿಸುತ್ತಿರುವಾಗಲೇ ಶೌಚಾಲಯದಲ್ಲಿ ಸಿಗರೇಟ್ ಸೇದಿದ ವ್ಯಕ್ತಿಯನ್ನು ಬೆಂಗಳೂರು ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಅಸ್ಲಾಂ ಬಂಧಿತ ವ್ಯಕ್ತಿ. ಈತ ದುಬೈನಿಂದ ನಗರಕ್ಕೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಶೌಚಾಲಯದಲ್ಲಿ ಸಿಗರೇಟ್ ಸೇದಿದ್ದಾನೆ. ವಿಮಾನದಲ್ಲಿದ್ದ ಅಧಿ ಕಾರಿಗಳು ಇದನ್ನು ಗಮನಿಸಿದ್ದಾರೆ.
ವಿಮಾನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ನಿಲ್ದಾಣದ ಪೊಲೀಸರಿಗೆ ದೂರು ನೀಡಿದ್ದಾರೆ . ದೂರಿನನ್ವಯ ಆ ವ್ಯಕ್ತಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Post a comment
Log in to write reviews