ಹಾಸನ: ಕೌಟುಂಬಿಕ ಕಲಹದಿಂದ ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಸಾಲವಾರ ಗಾಮದಲ್ಲಿ ನಡೆದಿದೆ.
ಪತಿ ಹರೀಶ್ (50) ಪತ್ನಿ ಜಾಜಿ (45) ಮೃತ ದಂಪತಿಗಳು. ದಂಪತಿಗಳ ನಡುವೆ ಪ್ರತಿದಿನ ಒಂದಲ್ಲಾ ಒಂದು ವಿಷಯಕ್ಕೆ ಜಗಳ ನಡೆಯುತ್ತಿತ್ತು. ಸೋಮವಾರ ರಾತ್ರಿಯೂ ದಂಪತಿಯ ನಡುವೆ ಜಗಳ ನಡೆದಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿ ಈ ಘಟನೆ ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a comment
Log in to write reviews