ಪ್ಯಾರಿಸ್ : ಭಾನುವಾರ 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಶೂಟರ್ ಮನು ಭಾಕರ್ ಇದೀಗ ಮತ್ತೊಂದು ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಮಂಗಳವಾರ ನಡೆದ 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಜತೆಗೂಡಿ ಮನು ಭಾಕರ್ ಕಂಚಿನ ಪದಕ ಗೆಲ್ಲುವ ಮೂಲಕ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎಂಬ ಐತಿಹಾಸಿಕ ಸಾಧನೆಗೆ ಪಾತ್ರರಾಗಿದ್ದಾರೆ.
ಭಾರತೀಯ ಜೋಡಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊಲೀ ವಿರುದ್ಧ 16-10 ಅಂಕಗಳಿಂದ ಗೆದ್ದು ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ.
22 ವರ್ಷದ ಮನು ಭಾಕರ್ ಈ ಬಾರಿಯ ಒಲಿಂಪಿಕ್ಸ್ ಪದಕ ನಿರೀಕ್ಷೆಯ ಕ್ರೀಡಾಪಟುಗಳ ಪಟ್ಟಿಯಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದರು. ಇದೀಗ ಭಾರತೀಯರು ನಿರೀಕ್ಷೆ ಮಾಡಿದಂತೆ ಅವರು ಒಂದಲ್ಲ 2 ಪದಕ ಗೆದ್ದು ತಮ್ಮ ಮೇಲಿಟ್ಟ ನಿರೀಕ್ಷೆಯನ್ನುಉಳಿಸಿಕೂಂಡಿದ್ದಾರೆ.
Post a comment
Log in to write reviews