ಬೆಂಗಳೂರು : ಟ್ರಿನಿಟಿ ಮೆಟ್ರೋ ನಿಲ್ದಾಣದ ತಾಂತ್ರಿಕ ದೋಷ ಹಿನ್ನಲೆ ದುರಸ್ತಿ ಕಾರ್ಯ ಕೈಗೊಳ್ಳುವ ನಿಟ್ಟಿನಲ್ಲಿ ಚಲ್ಲಘಟ್ಟದಿಂದ ಕೆಂಗೇರಿವರೆಗಿನ ನೇರಳೆ ಮಾರ್ಗದ ಮೆಟ್ರೋ ಸೇವೆಯನ್ನು ಸೋಮವಾರ(ಜೂನ್ 17) ನಿಲ್ಲಿಸುವುದಾಗಿ ಬಿಎಂಆರ್ಸಿಎಲ್ ಪ್ರಕಟಣೆ ಹೊರಡಿಸಿದೆ.
ಚಲ್ಲಘಟ್ಟ ಮೆಟ್ರೋ ನಿಲ್ದಾಣದಲ್ಲಿ ದಿನಾಂಕ 17ನೇ ಜೂನ್ 2024 (ಸೋಮವಾರ) ರಂದು ನಿರ್ವಹಣೆ ಕೆಲಸ ನಡೆಯಲಿದೆ. ಹೀಗಾಗಿ ಕೆಂಗೇರಿ ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಯನ್ನು ಬೆಳಗ್ಗೆ 5 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಿಲ್ಲಿಸಲಾಗುವುದು. ಮಧ್ಯಾಹ್ನ 1 ಗಂಟೆಯ ನಂತರ ವೇಳಾಪಟ್ಟಿಯ ಪ್ರಕಾರ ಚಲ್ಲಘಟ್ಟ ಮತ್ತು ವೈಟ್ ಫೀಲ್ಡ್ ನಡುವಿನ ನೇರಳೆ ಮಾರ್ಗದ ಸೇವೆ ಲಭ್ಯವಿದ್ದು, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಎಂದಿನಂತೆ ವೇಳಾಪಟ್ಟಿಯ ಪ್ರಕಾರ ಚಲಿಸುತ್ತವೆ. ಪ್ರಯಾಣಿಕರ ಅನಾನುಕೂಲಕ್ಕೆ ವಿಷಾದಿಸುತ್ತೇವೆ ಎಂದು ನಮ್ಮ ಮೆಟ್ರೋ ರೈಲು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
Post a comment
Log in to write reviews