ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ವಾರ ಕಳೆಯುವ ಮೊದಲೇ, ಗಣಿ ಗುತ್ತಿಗೆ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಅನುಮತಿ ನೀಡುವಂತೆ ಎಸ್‌ಐಟಿ ಮನವಿ ಮಾಡಿರುವುದು ರಾಜ್ಯಪಾಲರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರನ್ನು ಮುಂದಿಟ್ಟುಕೊಂಡು ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದೀಗ ಅಸ್ತಿತ್ವದಲ್ಲಿರದ ಕಂಪನಿಗೆ ಗಣಿಗಾರಿಕೆಗೆ ಅನುಮತಿ ನೀಡಿದ ಆರೋಪದಲ್ಲಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ವಿಶೇಷ ತನಿಖಾ ತಂಡ ಮನವಿ ಸಲ್ಲಿಸಿದೆ. ಎಚ್.ಡಿ.ಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದಿದ್ದರೆ, ಸಿಎಂ ವಿರುದ್ಧ ತರಾತುರಿಯಲ್ಲಿ ನೀಡಿದ್ದು ಏಕೆ ಎನ್ನುವ ಪ್ರಶ್ನೆ ಉದ್ಭವಿಸಲಿದೆ. ಆದ್ದರಿಂದ ಇದೀಗ ಅನಿವಾರ್ಯವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಇಕ್ಕಟ್ಟಿಗೆ ರಾಜ್ಯಪಾಲರು ಸಿಲುಕಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಕೇಂದ್ರ ಸಚಿವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ, ಸಿದ್ದು ರಾಜೀನಾಮೆಗೆ - ಒತ್ತಾಯ ಕೇಳಿಬಂದಂತೆ ಎಚ್‌ಡಿಕೆ ರಾಜೀನಾಮೆಗೂ ಆಗ್ರಹ ಕೇಳಿಬರಲಿದೆ. ಈ ಮೂಲಕ ಬಿಜೆಪಿ-ಜೆಡಿಎಸ್ ದೋಸ್ತಿ - ಪಕ್ಷಗಳನ್ನು ಒಂದೇ ಹಗ್ಗದಲ್ಲಿ ಕಟ್ಟಿಹಾಕಲು ರಾಜ್ಯ ಸರಕಾರ ಮುಂದಾಗಿದೆ.
2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಗಣಿ ಮತ್ತು ಖನಿಜ ನಿಯಮ ಉಲ್ಲಂಘಿಸಿ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ್ದಾರೆ ಎಂಬ ಆರೋಪವಿದ್ದು, ಇದಕ್ಕೆ ಸಬಂಧಿಸಿದಂತೆ ಎಸ್‌ಐಆರ್ ದಾಖಲಿಸಲು ಅನುಮತಿ ನೀಡುವಂತೆ ಎಸ್‌ಐಟಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಸಂಬಂಧ ವರ್ಷದ ಹಿಂದೆಯೇ ಎಸ್‌ಐಟಿ ಮನವಿ ಮಾಡಿತ್ತು. ಕಟ ಇದೀಗ ಎರಡನೇ ಬಾರಿಗೆ ಚಾರ್ಜ್ ಶೀಟ್ ಸಲ್ಲಿಸಲು ಅಭಿಯೋಜನೆಗೆ ಅನುಮತಿ ಕೇಳಲಾಗುತ್ತಿದೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು, ಕುಮಾರಸ್ವಾಮಿ ಪ್ರಕರಣದಲ್ಲಿ ನೀಡದಿದ್ದರೆ, ಕೇಂದ್ರ ಸರಕಾರ ಹಾಗೂ ರಾಜ್ಯಪಾಲರು 'ದ್ವೇಷದ ರಾಜಕೀಯ' ಮಾಡುತ್ತಿದ್ದಾರೆ. ಬಿಜೆಪಿಯ ವಿರೋಧಿಗಳನ್ನು ಕಟ್ಟಿಹಾಕಲು ರಾಜಭವನವನ್ನು ಬಳಸಿಕೊಳ್ಳುತ್ತಿದ್ದಾರೆ ಎನ್ನುವ ಅಸ್ತ್ರವನ್ನು ಕಾಂಗ್ರೆಸ್ ಪ್ರಯೋಗಿಸುವ ಸಾಧ್ಯತೆಯಿದೆ.
ಮೈತ್ರಿ ಕೂಟಕ್ಕೆ ಬಹುದೊಡ್ಡ ಹಿನ್ನಡೆ: ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ನಡೆಸಿ, ಪ್ರತಿಭಟನೆ ನಡೆಸಿದ್ದ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಎಸ್‌ಐಟಿಯ ಈ ನಡೆ ತೀವ್ರ ಹಿನ್ನಡೆಯಾಗಿದೆ. ಬಿಜೆಪಿಗೆ ಕುಮಾರಸ್ವಾಮಿ ಪರ ನಿಲ್ಲುವುದು ಅನಿವಾರ್ಯವಾಗಿದ್ದು, ಇಲ್ಲದಿದ್ದರೆ ಮೈತ್ರಿಯಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಇದೇ ವಿಷಯ ಬಯಸಿರುವ ಕಾಂಗ್ರೆಸ್ ಹೋರಾಟ ನಡೆಸುವುದು ಖಚಿತವಾಗಿದೆ. ಈ ಪ್ರಕರಣದಲ್ಲಿ ಯಾವ ನಡೆ ಅನುಸರಿಸಬೇಕು ಎನ್ನುವ ಗೊಂದಲಕ್ಕೆ ಬಿಜೆಪಿ ಬಿದ್ದಿದೆ ಎನ್ನಲಾಗಿದೆ.
ನ್ಯಾಯಾಲಯದಲ್ಲಿಯೂ ಹೋರಾಟ?: ಮೂಲಗಳ ಪ್ರಕಾರ ಕುಮಾರಸ್ವಾಮಿ ವಿರುದ್ಧದ ಈ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಒಪ್ಪಿಗೆ ನೀಡುವ ಸಾಧ್ಯತೆ ಕಡಿಮೆ. ಒಂದು ವೇಳೆ 29ರೊಳಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದಿದ್ದರೆ, ಹೈಕೋರ್ಟ್‌ಲ್ಲಿ - ವಿಚಾರಣೆ ವೇಳೆ ಕುಮಾರಸ್ವಾಮಿ ಪ್ರಕರಣ ತೋರಿಸಿ, ಸಿದ್ದ ರಾಮಯ್ಯ ವಿರುದ್ಧ ಅಭಿಯೋಜನೆಗೆ 15 ದಿನದಲ್ಲಿ ಅವಕಾಶ ನೀಡಿರುವ ರಾಜ್ಯಪಾಲರು, ಕುಮಾರಸ್ವಾಮಿ ವಿರುದ್ಧ ಪ್ರಕರಣ : ದಲ್ಲಿ ವರ್ಷ ಕಳೆದರೂ ಏಕೆ ನೀಡುತ್ತಿಲ್ಲ? ಜೆಡಿಎಸ್ ಬಿಜೆಪಿಯ ಮೈತ್ರಿಯ ಭಾಗ ಎನ್ನುವ ಕಾರಣಕ್ಕೆ ಕುಮಾರಸ್ವಾಮಿ ಪ್ರಕರಣ ದಲ್ಲಿ ವಿಳಂಬನೀತಿಯನ್ನು ರಾಜ್ಯಪಾಲರು ತೋರಿಸುತ್ತಿದ್ದಾರೆ.
Post a comment
Log in to write reviews