ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸಾಗರದ ಮಾಜಿ ಸಚಿವ ಕೆ.ಎಚ್.ಶ್ರೀನಿವಾಸ್ ಅವರು ಇಂದು ನಿಧನರಾದರು.
ಸಮಾಜವಾದಿ ಚಿಂತನೆಯ ಹಿನ್ನೆಲೆಯ ಶ್ರೀನಿವಾಸ್ ಅವರು ಶಿವಮೊಗ್ಗ ಜಿಲ್ಲೆ ಸಾಗರದಿಂದ ತಮ್ಮ ರಾಜಕೀಯವನ್ನು ಆರಂಭಿಸಿದರು. ಕಾಂಗ್ರೆಸ್, ಜೆಡಿಎಸ್, ಕೆಜೆಪಿ ಮತ್ತು ಬಿಜೆಪಿಯಲ್ಲಿ ಇದ್ದರು. ಆದರೆ ಅವರು ಹಲವು ವರ್ಷಗಳಿಂದ ಸಕ್ರಿಯ ರಾಜಕೀಯದಿಂದ ದೂರ ಉಳಿದಿದ್ದರು. ಶಾಂತವೇರಿ ಗೋಪಾಲಗೌಡ ಮತ್ತು ಕುವೆಂಪು ಅವರ ಪ್ರಭಾವಕ್ಕೆ ಒಳಗಾಗಿದ್ದ ಅವರು, ಡಾ.ಯು.ಆರ್.ಅನಂತಮೂರ್ತಿ, ಕೆ.ವಿ.ಸುಬ್ಬಣ್ಣ, ಲಂಕೇಶ್ ಅವರ ಒಡನಾಡಿಯೂ ಆಗಿದ್ದರು.
ಡಿ.ದೇವರಾಜ ಅರಸು ಅವರ ಸರ್ಕಾರದಲ್ಲಿ ಇಂಧನ, ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಮತ್ತು ಇತರ ಖಾತೆಗಳನ್ನು ನಿರ್ವಹಿಸಿದ್ದರು. ಕಾಂಗ್ರೆಸ್ ನಲ್ಲಿ ಮೂಲೆಗುಂಪು ಮಾಡಿದಾಗ ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು. ಆ ಸಂದರ್ಭದಲ್ಲಿ ಅವರು ವಿಧಾನಪರಿಷತ್ ನ ವಿರೋಧಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದರು.
Post a comment
Log in to write reviews