ಬೆಂಗಳೂರು: ಸುದ್ದಿಗಾರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ , ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ವಿಚಾರವಾಗಿ ನಾನು ಮತ್ತು ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಯಾಗಬಾರದೆಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಲಿದ್ದಾರೆ. ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜೊತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದರು.
ಇನ್ನು ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ಡಿಸಿಎಂ ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಉತ್ತಮ ಪ್ರದರ್ಶನ ನೀಡಿದೆ, ನಮ್ಮ ಮೈತ್ರಿಕೂಟ ಅಧಿಕಾರದ ಸನಿಹಕ್ಕೆ ಬಂದರೂ ಸರ್ಕಾರ ರಚನೆ ಪ್ರಯತ್ನದಿಂದ ದೂರವಿರಲು ನಿರ್ಧರಿಸಿದೆ. ಪ್ರತಿಪಕ್ಷಗಳು ಬಲಿಷ್ಠವಾಗಿರಬೇಕು ಎಂದು ದೇಶ ಅಭಿಪ್ರಾಯ ಪಟ್ಟಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ರಕ್ಷಣೆಗೆ ಹೊಸ ಭರವಸೆ ಸಿಕ್ಕಿದೆ. ಭವಿಷ್ಯದ ಬಗ್ಗೆ ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ ಎಂದರು.
Post a comment
Log in to write reviews