ಬೆಂಗಳೂರು: ಕೇಂದ್ರ ಸರ್ಕಾರ ಅನೇಕ ನೀತಿಗಳನ್ನು ಮಾಡುವ ಸಂದರ್ಭದಲ್ಲಿ ಜನರ ದೃಷ್ಟಿಯಿಂದ ರೂಪಿಸಬೇಕು ಎಂದು ಪರಮೇಶ್ವರ್ ಹೇಳಿದರು.
ಮೂರನೇ ಬಾರಿಗೆ ಪ್ರಧಾನಿಯಾದ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ ಅವರು, ಕಳೆದ ಹತ್ತು ವರ್ಷಗಳಲ್ಲಿ ನಮ್ಮ ಜನ ಸಮುದಾಯ ಅನೇಕ ತೊಂದರೆಗಳಿಗೆ ಒಳಗಾಗಿದ್ದಾರೆ. ಜನರಿಗೆ ವಿರುದ್ಧವಾದ ತೀರ್ಮಾನ ಹಾಗೂ ಕಾನೂನುಗಳನ್ನು ಕಳೆದ ಹತ್ತು ವರ್ಷದಲ್ಲಿ ಮಾಡಿದ್ದಾರೆ. ಏನೆಲ್ಲ ತಪ್ಪುಗಳಾಗಿದೆಯೋ ಅದೆಲ್ಲವನ್ನು ಸರಿಪಡಿಸಿಕೊಂಡು ಜನಪರ ಕೆಲಸ ಮಾಡಲಿ ಎಂದು ಆಶಿಸುತ್ತೇನೆ ಎಂದರು.
ರಾಜ್ಯಕ್ಕೆ ಹೆಚ್ಚು ಸಚಿವ ಸ್ಥಾನಗಳು ಸಿಕ್ಕು, ರಾಜ್ಯಕ್ಕೆ ಮತ್ತಷ್ಟು ಯೋಜನೆಗಳು ಜಾರಿಗೊಳ್ಳಲಿ. ರಾಜ್ಯವನ್ನು ಪ್ರತಿನಿಧಿಸಿದ ಕೇಂದ್ರ ಸಚಿವರು ಇದುವರೆಗೂ ರಾಜ್ಯದ ಹಿತ ಕಾಪಾಡುವುದರಲ್ಲಿ ವಿಫಲರಾಗಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಹೋರಾಟ ಮಾಡುವಲ್ಲಿ ನಿರ್ಮಲಾ ಸೀತಾರಾಮನ್ ಸೇರಿದಂತೆ ಇನ್ನುಳಿದ ಸಚಿವರು ವಿಫಲರಾಗಿದ್ದಾರೆ ಎಂದರು.
Post a comment
Log in to write reviews