ಬೆಂಗಳೂರು :ಪತ್ರಕರ್ತರಿಗಾಗಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಬುಧುವಾರ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಸಹಯೋಗದಲ್ಲಿ ಬೆಂಗಳೂರು, ಕಲಬುರಗಿ ಮತ್ತು ಮೈಸೂರಿನಲ್ಲಿ ಶಿಬಿರ ನಡೆಸಲು ಸೂಚಿಸುವುದಾಗಿ ತಿಳಿಸಿದರು.
ಸೂಪರ್ ಸ್ಟೆಷಾಲಿಟಿ ಆಸ್ಪತ್ರೆಗಳಲ್ಲಿ ಆದ್ಯತೆ ಮೇರೆಗೆ ಪತ್ರಕರ್ತರಿಗೆ ಪ್ರತ್ಯೇಕ ಕೊಠಡಿಯನ್ನು ಆದ್ಯತೆ ಮೇಲೆ ಕಾಯ್ದಿರಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಆಗಬೇಕು ಎನ್ನುವ ಪತ್ರಕರ್ತರ ಸಂಘದ ಬೇಡಿಕೆಯನ್ನು ಪರಿಗಣಿಸಿದ್ದೇನೆ ಇದರ ಬಗ್ಗೆ. ಆಸ್ಪತ್ರೆಯ ಮುಖ್ಯಸ್ಥರಿಗೆ ಸೂಚನೆ ನೀಡಲಾಗುವುದು ಎಂದು ಸಚಿವರು ಹೇಳಿದರು
ಯಶಸ್ವಿನಿ ಯೋಜನೆ ವ್ಯಾಪ್ತಿತಿಗೆ ಪತ್ರಕರ್ತರನ್ನು ಸೇರ್ಪಡೆಮಾಡಿದರೆ ಸಾಕಷ್ಟು ಅನುಕೂಲವಾಗಲಿದೆ. ಪತ್ರಕರ್ತರಿಗಾಗಿಯೇ ಪ್ರತ್ಯೇಕ ಆರೋಗ್ಯ ಯೋಜನೆ ಮಾಡಿದರೂ ಉತ್ತಮ ಎಂದು ಕೇಳಿದ್ದಕ್ಕೆ. ನಿಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಮಾಡುವುದಾಗಿ ತಿಳಿಸಿದರು.
ಈ ವೇಳೆ ಮಾತನಾಡಿದ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಷ್ಟದಲ್ಲಿ ಬದುಕುತ್ತಿರುವ ಪತ್ರಕರ್ತರಿಗೆ ಆರೋಗ್ಯ ಸಮಸ್ಯೆ ಬಂದಾಗ ತಕ್ಷಣವೇ ಸ್ಪಂಧಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆಗಳಲ್ಲಿ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಉಪಾಧ್ಯಕ್ಷರುಗಾಳದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಭವಾನಿಸಿಂಗ್ ಠಾಕೂರ್, ಪುಂಡಲೀಕ ಬಾಳೋಜಿ, ಮತ್ತು ಕಾರ್ಯದರ್ಶಿಗಳಾದ ಸೋಮಶೇಖರ ಕೆರಗೋಡು, ಖಜಾಂಚಿ ವಾಸುದೇವ ಹೊಳ್ಳ, ಶರಣ ಬಸಪ್ಪ, ಸಚಿವರ ಮಾಧ್ಯಮ ಸಂಯೋಜಕ ಅನಿಲ್ ಕುಮಾರ್ ಮತ್ತಿತರು ಹಾಜರಿದ್ದರು.
Post a comment
Log in to write reviews