ನನ್ನ ನಲವತ್ತು ವರ್ಷಗಳ ರಾಜಕಾರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಕಪ್ಪು ಚುಕ್ಕೆ ಇಲ್ಲ ಎನ್ನುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣ ಕೇಸ್ ದಿನೇ ದಿನೇ ಉರುಳು ಬಿಗಿಯಾಗುತ್ತಿದೆ. ಸಿಎಂ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಇಂದಿನಿಂದ ಅಸಲಿ ತನಿಖೆ ಶುರುವಾಗಲಿದೆ. ಇಂದಿನಿಂದ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆ ಚುರುಕುಗೊಳ್ಳಲಿದ್ದು, ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದ 4 ತಂಡಗಳಿಂದ ತನಿಖೆ ನಡೆಯಲಿದೆ.
ಇನ್ನು ಮುಡಾ ಕೇಸ್ ಸಿಎಂ ಸಿದ್ದರಾಮಯ್ಯಗೆ ಹೆಜ್ಜೆ ಹೆಜ್ಜೆಗೂ ಸಂಕಷ್ಟ ಹೆಚ್ಚಾಗುತ್ತಿದ್ದು, ಅದರಲ್ಲೂ, ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾದ ಬಳಿಕ ಹೈ ಅಲರ್ಟ್ ಆಗಿರುವ ಪೊಲೀಸರು, ಇಂದಿನಿಂದ ತನಿಖೆ ಚುರುಕುಗೊಳಿಸುತ್ತಿದ್ದಾರೆ. ಈ ಮಧ್ಯೆ ಸಿದ್ದರಾಮಯ್ಯಗೆ ಜಾರಿ ನಿರ್ದೇಶನಾಲಯದ ತನಿಖೆಯ ಆತಂಕವೂ ಎದುರಾಗಿದೆ.
ಈ ಮುಡಾ ಹಗರಣದಲ್ಲಿ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1, ಅವರ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ.
Post a comment
Log in to write reviews