ಬೆಂಗಳೂರು: ಮುಡಾ ಹಗರಣ (MUDA Scam) ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಮಾನಿಸಲಿದೆ.
ಕೋರ್ಟ್‌ನ ಈ ಆದೇಶವನ್ನು ಆಧರಿಸಿ ಸಿಎಂ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸಲಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ಕೋರ್ಟ್ ನೀಡುವ ಆದೇಶವನ್ನು ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ನೀಡಿರುವ ದೂರನ್ನು ಪರಿಗಣಿಸಿ ಅಭಿಯೋಜನೆಗೆ ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದಾರೆ. ನಾಳೆ ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಸಂಬಂಧ ನ್ಯಾಯಾಲಯವು ಆದೇಶ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣ ಒಂದು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಅಲ್ಲದೆ ಇತ್ತೀಚಿಗೆ ಬಿಜೆಪಿ ಮತ್ತು ಜೆಡಿಎಸ್ ಈ ಒಂದು ಹಗರಣವನ್ನು ಖಂಡಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬೆಂಗಳೂರಿನಿಂದ ಮೈಸೂರಿನವರೆಗೆ ಮೈಸೂರು ಚಲೋ ಪಾದಯಾತ್ರೆ ಕೂಡ ಮಾಡಿತ್ತು. ಇದಕ್ಕೆ ಕೌಂಟರ್ ಕೊಡಲು ಕಾಂಗ್ರೆಸ್ ಸಹ ಜನಾಂದೋಲನ ಸಭೆಯನ್ನು ಸಹ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ.
Post a comment
Log in to write reviews