Samayanews.

Samayanews.

2024-12-24 10:47:16

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮುನಿರತ್ನಗೆಮತ್ತೆನಿರಾಸೆ: ಜಾಮೀನುಅರ್ಜಿವಿಚಾರಣೆ ಸೆ.25ಕ್ಕೆ

ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆಯು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್​ 25ಕ್ಕೆ ಮುಂದೂಡಿ ಆದೇಶಿಸಿದೆ.

ರಾಮನಗರದ ಕಗ್ಗಲಿಪುರ ಪೊಲೀಸ್​​ ಠಾಣೆಯಲ್ಲಿ ದಾಖಲಾಗಿರುವ ಆತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮುನಿರತ್ನ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಅವರು ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಇಂದು ವಿಚಾರಣೆ ಕೈಗೆತ್ತಿಕೊಳ್ಳುತ್ತಿದ್ದಂತೆ ವಾದ ಮಂಡಿಸಿದ ಎಸ್​​ಐಟಿ ವಿಶೇಷ ಅಭಿಯೋಜಕ (ಎಸ್‌ಪಿಪಿ) ಎಸ್.ಪಿ. ಪ್ರದೀಪ್, ''ದೂರುದಾರ ಮಹಿಳೆಗೆ ಜಾಮೀನು ಅರ್ಜಿ ಸಿಕ್ಕಿಲ್ಲ. ಅಲ್ಲದೆ, ನನಗೂ ಇಂದು ನೋಟಿಸ್ ಪ್ರತಿ ದೊರೆತಿದೆ. ಹೀಗಾಗಿ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು'' ಎಂದು ಮನವಿ ಮಾಡಿದರು. ಈ ಮನವಿ ಮಾನ್ಯ ಮಾಡಿದ ಕೋರ್ಟ್, ಸೆಪ್ಟೆಂಬರ್ 25ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿತು.

ಪೊಲೀಸ್ ಕಸ್ಟಡಿ ಕೋರಿ ಎಸ್ಐಟಿ ಮನವಿ: ಮತ್ತೊಂದೆಡೆ, ನ್ಯಾಯಾಂಗ ಬಂಧನದಲ್ಲಿರುವ ಮುನಿರತ್ನ ಅವರನ್ನು 14 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಬೇಕೆಂದು ಎಸ್ಐಟಿಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ಸಹ ನಡೆಯಿತು. ಪ್ರಕರಣ ಸಂಬಂಧ ದೂರುದಾರ ಮಹಿಳೆಗೆ ಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಜೈಲಿನಲ್ಲಿರುವ ಕಾರಣ ಆರೋಪಿ ಮುನಿರತ್ನ ಅವರನ್ನು ನಾಳೆ ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಬೇಕೆಂದು ಜೈಲಾಧಿಕಾರಿಗಳಿಗೆ ಸೂಚಿಸಿದ ನ್ಯಾಯಾಲಯ, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

img
Author

Post a comment

No Reviews