ರಾಯಚೂರು : ಮಟನ್ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಮಲಗಿದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ.
ಕಲ್ಲೂರು ಗ್ರಾಮದ ಮನೆಯಲ್ಲಿದ್ದ ಗಂಡ-ಹೆಂಡತಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಭೀಮಣ್ಣ (60), ಈರಮ್ಮ (57), ಮಲ್ಲೇಶ್ (21), ಪಾರ್ವತಿ (19) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಭೀಮಣ್ಣ ಅವರ ಮತ್ತೊಬ್ಬ ಪುತ್ರಿ ಮಲ್ಲಮ್ಮ (18) ತೀವ್ರ ಅಸ್ವಸ್ಥಗೊಂಡಿದ್ದು, ಆರೋಗ್ಯದ ಸ್ಥಿತಿ ಗಂಭೀರವಾಗಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭೀಮಣ್ಣ ಗುರುವಾರ ರಾತ್ರಿ ಮಟನ್ ತಂದಿದ್ದು, ಕುಟುಂಬಸ್ಥರು ರಾತ್ರಿ ಊಟ ಮಾಡಿ ಮಲಗಿದ್ದಾರೆ. ಆದರೆ ರಾತ್ರೋ ರಾತ್ರಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂದೆಡೆ ಮಟನ್ ತಿಂದವರಿಗೆ ಫುಡ್ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದ್ದು, ಮತ್ತೊಂದೆಡೆ ಮಟನ್ ಮಾಡುವ ವೇಳೆ ಅಡುಗೆಯಲ್ಲಿ ಹಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಭೀಮಣ್ಣನ ಮನೆಯವರು ಸಂಕಷ್ಟದಲ್ಲಿದ್ದು ಹೆಂಡತಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಸಾವಿಗೆ ನಿಕರವಾದ ಕಾರಣ ಇನ್ನು ತಿಳಿದು ಬಂದಿಲ್ಲ
ಘಟನ ಸ್ಥಳಕ್ಕೆ ಸಿರವಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಖಾಲಿಸಿಕೊಂಡಿದ್ದಾರೆ. ಭೀಮಣ್ಣ, ಈರಮ್ಮ, ಮಲ್ಲೇಶ್ ಹಾಗೂ ಪಾರ್ವತಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ
Post a comment
Log in to write reviews