ತರೌಬ: ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿ ತನ್ನ ಕೊನೆಯ ವಿಶ್ವಕಪ್ ಟೂರ್ನಿ ಎಂದು ನ್ಯೂಜಿಲೆಂಡ್‌ನ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ಹೇಳಿದ್ದಾರೆ.
ಉಗಾಂಡ ವಿರುದ್ಧದ ಗೆಲುವಿನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ 34 ವರ್ಷದ ಬೌಲ್ಟ್, ಇದು ನಾನು ಆಡಲಿರುವ ಕೊನೆಯ ಟಿ20 ವಿಶ್ವಕಪ್ ಟೂರ್ನಿ ಎಂದರು. ಆದರೆ ಮುಂಬರುವ ದಿನಗಳಲ್ಲಿ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಆಡಲಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ.
ಟೂರ್ನಿಯಲ್ಲಿ ನಾವೂ ಬಯಸಿದ ಆರಂಭ ದೊರೆಯಲಿಲ್ಲ. ಇದನ್ನು ಅರಗಿಸಿಕೊಳ್ಳುವುದು ಕಠಿಣವಾಗಿದೆ. ಆದರೆ ದೇಶವನ್ನು ಪ್ರತಿನಿಧಿಸುವುದು ಹೆಮ್ಮೆಯ ಕ್ಷಣ. ಡ್ರೆಸ್ಸಿಂಗ್ ರೂಮ್‌ನಲ್ಲಿ ಉತ್ತಮ ಪ್ರತಿಭೆಗಳಿವೆ ಎಂದು ಲೀಗ್ ಹಂತದಲ್ಲಿಯೇ ಹೊರಬಿದ್ದಿದಕ್ಕೆ ಬೇಸರ ವ್ಯಕ್ತಪಡಿಸಿದರು.
Post a comment
Log in to write reviews