ಬೆಂಗಳೂರು : ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ KUIDFC MDಯಾಗಿದ್ದ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮಿಕಾಂತ್ ರೆಡ್ಡಿ .ಕಾರ್ಯ ನಿರ್ವಹಿಸಿದ್ದರು. ಈಗ ಮೈಸೂರು ಜಿಲ್ಲಾಧಿಕಾರಿಯಾಗಿ ಅವರನ್ನು ನಿಯೋಜಿಸಲಾಗಿದೆ. ಮುಡಾ ಹಗರಣ ವಿಚಾರ ಭಾರೀ ಸಂಚಲನ ಮೂಡಿಸಿರುವ ಹೊತ್ತಲ್ಲೇ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮುಡಾ ಅಕ್ರಮ ಬಯಲು ಮಾಡಿದ್ದ ಕೆ.ವಿ ರಾಜೇಂದ್ರ ಅವರಿಗೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ರಾಜೇಂದ್ರ ಅವರು ಮುಡಾ ಅಕ್ರಮದ ಬಗ್ಗೆ ಹಲವು ಬಾರಿ ಸರ್ಕಾರಕ್ಕೆ ಪತ್ರ ಬರೆದಿದ್ದರು.
ಕಳೆದ 7 ತಿಂಗಳ ಹಿಂದೆಯೇ 50-50 ಅನುಪಾತದ ಸೈಟ್ ಹಂಚಿಕೆ ಬಗ್ಗೆ ಪತ್ರ ಬರೆದಿದ್ದು, ಸೈಟ್‌ಗಳ ಹಂಚಿಕೆ ಕಾನೂನು ಬಾಹಿರ ಎಂದು ಮುಡಾಗೂ ಎರಡು ಬಾರಿ ನೋಟಿಸ್ ನೀಡಿದ್ದರು. ಡಿ.ಸಿ ರಾಜೇಂದ್ರ ಅವರು ಬರೆದ ಪತ್ರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿರಲಿಲ್ಲ. ಪತ್ರವನ್ನು ನಿರ್ಲಕ್ಷ್ಯ ಮಾಡಿದ್ದರಿಂದ ಮುಡಾದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ
Post a comment
Log in to write reviews