ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್‌ಗೆ ಸೇರಿಸುವ ವಿಚಾರ ತೀವ್ರ ಬಿರುಗಾಳಿ ಎದ್ದಿದ್ದು, ರೈತರು ಕಂಗಲಾಗಿದ್ದಾರೆ. ತಮ್ಮ ಜಮೀನುಗಳ ಪಹಣಿ ಪತ್ರಗಳಲ್ಲಿ ವಕ್ಫ್ ಬೋರ್ಡ್ ಹೆಸರನ್ನು ಸೇರಿಸಿರುವುದನ್ನು ರೈತರು ಪ್ರಶ್ನಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳು ರೈತರು ಭಯಪಡಬಾರದು ಎಂದು ಮನವಿ ಮಾಡಿದ್ದಾರೆ.
ನಡುವೆಯೇ ರೈತರ ಜಮೀನುಗಳಲ್ಲಿನ ಪಹಣಿ ಪತ್ರದಲ್ಲಿನ ಕಾಲಂ ನಂಬರ್ 11ರ ಋಣಗಳು ಕಾಲಂನಲ್ಲಿ “ಕರ್ನಾಟಕ ವಕ್ಫ್ ಬೋರ್ಡ್ ಬೆಂಗಳೂರು ಮಸಜಿತ್ (ಸುನ್ನಿ) ವಕ್ಫ್”ಎಂದು ನಮೂದಿಸಲಾಗಿದೆ. ರೈತರ ಜಮೀನಿನ ಮೇಲೆ ವಕ್ಫ್ ಬೋರ್ಡ್ ಸಾಲ ಪಡೆದು ಭೋಜ ಹಾಕಿಸಿದೆ. ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಭೋಜ ಇರುವ ಕಾರಣ ಸಾಲ ಸಿಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತೆನ್ನಿಹಳ್ಳಿ ಗ್ರಾಮದ ಯಮನಪ್ಪ ಕೆಂಗನಾಳ ಅವರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಸೇರ್ಪಡೆಯಾಗಿದೆ. ರೈತ ಯಮನಪ್ಪ ಕೆಂಗನಾಳ ಅವರಿಗೆ ಯಾವುದೇ ತಿಳವಳಿಕೆ ಪತ್ರ ನೀಡದೆ, ತಹಶೀಲ್ದಾರ್ ಏಕಾಏಕಿ ಪಹಣಿ ಪತ್ರದಲ್ಲಿ ವಕ್ಫ್ ಬೋರ್ಡ್ ಎಂದು ಹೆಸರು ಸೇರಿಸಿದ್ದಾರೆ.
ನೋಟಿಸ್ ನೀಡದೆ ಏಕಾಏಕಿ ತಮ್ಮ ಜಮೀನುಗಳ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಸೇರಿಸಿದ್ದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Post a comment
Log in to write reviews