ದೊಡ್ಡಬಳ್ಳಾಪುರ: ಬೆಂಗಳೂರು ಪದವೀಧರರ ಕ್ಷೇತ್ರದಿಂದ ನಡೆಯುತ್ತಿರುವ ಪರಿಷತ್ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 25 ಮತಗಟ್ಟೆ ಸ್ಥಾಪಿಸಲಾಗಿದೆ. ಎಲ್ಲ ಮತಗಟ್ಟೆಗಳ ವ್ಯಾಪ್ತಿಯಲ್ಲೂ ಅಗತ್ಯ ಭದ್ರತಾ ಕ್ರಮ ಕೈಗೊಳ್ಳಲಾಗಿದ್ದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮತದಾನಕ್ಕೆ ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ದೊಡ್ಡಬಳ್ಳಾಪುರ ಪಟ್ಟಣದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಗ್ರಂಥಾಲಯ(ದಕ್ಷಿಣ ವಿಭಾಗ) ಕೊಠಡಿಯಲ್ಲಿ ಆ ಭಾಗದ ಪದವೀಧರ ಮತದಾರರು ಮತ ಚಲಾಯಿಸಬಹುದಾಗಿದೆ.
ದೊಡ್ಡ ಬೆಳವಂಗಲ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆ, ಮಧುರೆ ಹೋಬಳಿಯ ಕನಸವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಾಸಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ತೂಬಗೆರೆ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಆಯಾ ಭಾಗದ ಮತದಾರರು ಮತ ಚಲಾಯಿಸಬಹುದು.
ದೇವನಹಳ್ಳಿಯ ಮತದಾರರಿಗಾಗಿ ಟೌನ್ ಹಾಲ್, ಪುರಸಭೆ ಕಾರ್ಯಾಲಯದ ಕೊಠಡಿ, ಗ್ರಾಮ ಪಂಚಾಯತ್‌ಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಚನ್ನರಾಯಪಟ್ಟಣ ಹೋಬಳಿಯ ಪದವೀಧರ ಮತದಾರರು ಕುಂದಾಣ, ವಿಜಯಪುರ, ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಹೊಸಕೋಟೆ ತಾಲೂಕಿನ ಮತದಾರರಿಗೆ ತಾಲೂಕು ಪಂಚಾಯತ್ ಕಾರ್ಯಾಲಯ, ಆನುಗೊಂಡನಹಳ್ಳಿ, ಜಡಿಗೇನಹಳ್ಳಿ, ನಂದಗುಡಿ ಹಾಗೂ ಸೂಲಿಬೆಲೆಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದ್ದು ಇಲ್ಲಿ ಮತ ಚಲಾಯಿಸಬಹುದಾಗಿದೆ.
Post a comment
Log in to write reviews