Samayanews.

Samayanews.

2024-12-24 01:09:36

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೈಸೂರು ಅರಮನೆ ನೋಡಲು ಕ್ಯೂನಲ್ಲಿ ನಿಲ್ಲಬೇಕಿಲ್ಲ; ವಾಟ್ಸಾಪ್ ನಲ್ಲೇ ಸಿಗುತ್ತೆ ಟಿಕೆಟ್

ಮೈಸೂರು : ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ (Mysuru Dasara) ಮಹೋತ್ಸವ ಅಗಸ್ಟ್.3 ರಿಂದ ಅಗಸ್ಟ್.12 ರ ವರೆಗೆ ನಡೆಯಲಿದೆ. ದಸರಾಕ್ಕೆ ಈಗಾಗಲೇ ತಯಾರಿ ಶುರುವಾಗಿದೆ. ಇನ್ನು ಮತ್ತೊಂದೆಡೆ ಇಂದಿನಿಂದ ಮೈಸೂರು ಅರಮನೆ ವೀಕ್ಷಣಗೆ ವಾಟ್ಸಾಪ್​​ ಟಿಕೆಟ್ ನೀಡಲಾಗುತ್ತಿದೆ. ಮೈಸೂರು ಅರಮನೆ (Mysuru Palace) ನೋಡಲು ಬರುವ ಪ್ರವಾಸಿಗರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ EDCS ಮೊಬೈಲ್ ಒನ್ ಯೋಜನೆಯ ಮೂಲಕ ಟಿಕೆಟ್ ಖರೀದಿಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ಪ್ರವಾಸಿಗರು ಸರ್ಕಾರದ ಇಡಿಸಿಎಸ್ ಮೊಬೈಲ್ ಒನ್ ಯೋಜನೆಯ ಮೂಲಕ ಮೊಬೈಲ್​ನಲ್ಲೆ ಅರಮನೆ ವೀಕ್ಷಣೆಗೆ ಟಿಕೆಟ್ ಖರೀದಿ ಮಾಡಬಹುದು. ವಾಟ್ಸಾಪ್​​ನಲ್ಲಿ 8884160088 ನಂಬರ್​ಗೆ ಎಜಿ ಎಂದು ಟೈಪ್ ಮಾಡಿ ಸಂದೇಶ ಕಳಿಸುವ ಮೂಲಕ ಟಿಕೆಟ್ ಪಡೆಯಬಹುದು. ವಾಟ್ಸಾಪ್​​ನಲ್ಲಿ ಖರೀದಿಸಿದ ಟಿಕೆಟ್ 5 ದಿನದವರೆಗೆ ಮಾನ್ಯತೆ ಇರುತ್ತದೆ. ಇದರಿಂದ ಸರತಿ ಸಾಲಿನಲ್ಲಿ ಬಂದು ಟಿಕೆಟ್ ಖರೀದಿಸುವ ಅವ್ಯಶಕತೆ ಇರುವುದಿಲ್ಲ

img
Author

Post a comment

No Reviews