ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಹಾಗೆಯೇ ಮಮತಾ ಬ್ಯಾನರ್ಜಿ ಆಡಳಿತದಲ್ಲಿ ನುಸುಳುಕೋರರು ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ ಮತ್ತು ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನವನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳದ ಜನರಿಗೆ ಭರವಸೆ ನೀಡಿದರು.
ಬರಾಕ್ಪುರದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪಶ್ಚಿಮ ಬಂಗಾಳದ ಜನರಿಗೆ ಐದು ಭರವಸೆಗಳನ್ನು ನೀಡಿದರು.
ನಾನು ಬಂಗಾಳದ ಜನರಿಗೆ ಐದು ಭರವಸೆಗಳನ್ನು ನೀಡಲು ಬಯಸುತ್ತೇನೆ: ಧರ್ಮದ ಆಧಾರದ ಮೇಲೆ ಯಾರೂ ಮೀಸಲಾತಿ ನೀಡಲು ಸಾಧ್ಯವಿಲ್ಲ. ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೀಸಲಾತಿಯನ್ನು ಮುಟ್ಟಲಾಗುವುದಿಲ್ಲ. ರಾಮನವಮಿ ಆಚರಿಸುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ರಾಮ ಮಂದಿರ ನಿರ್ಮಾಣದ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ರದ್ದುಗೊಳಿಸಲಾಗುವುದಿಲ್ಲ. ಸಿಎಎ ಅನುಷ್ಠಾನವನ್ನು ಯಾರೂ ತಡೆಯಲು ಸಾಧ್ಯವಿಲ್ಲ" ಎಂದು ಪ್ರಧಾನಿ ಮೋದಿ ಹೇಳಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದರೆ ಸುಪ್ರೀಂ ಕೋರ್ಟ್ನ ರಾಮ ಮಂದಿರ ತೀರ್ಪನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಮಾಜಿ ಕಾಂಗ್ರೆಸ್ ಮುಖಂಡ ಆಚಾರ್ಯ ಪ್ರಮೋದ್ ಕೃಷ್ಣಂ ಹೇಳಿದ ಕೆಲವು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ತೀರ್ಪಿನ ಬಗ್ಗೆ ಹೇಳಿಕೆ ನೀಡಿದ್ದಾರೆ.
Post a comment
Log in to write reviews