ಢಾಕಾ: ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪ ತಾಳಿದ್ದು, ಪ್ರಧಾನಿ ಶೇಖ್ ಹಸೀನಾ (Sheik Hasina) ಅವರು ರಾಜೀನಾಮೆ ನೀಡಿ ಪ್ರಾಣಭಯದಿಂದ ಭಾರತಕ್ಕೆ ಆಗಮಿಸಿ ಆಶ್ರಯ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದೆ ಕಂಗನಾ ರಣಾವತ್ ಯಾವ ಮುಸ್ಲಿಂ ರಾಷ್ಟ್ರವೂ ಸುರಕ್ಷಿತವಲ್ಲ ಎಂದಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಂಗನಾ ಪೊಸ್ಟ್ ಮತ್ತೊಂದು ಚರ್ಚೆಗೆ ಕಾರಣವಾಗಿದೆ. ಭಾರತವು ಸುತ್ತಲಿನ ಎಲ್ಲ ಇಸ್ಲಾಮಿಕ್ ಪ್ರಜಾಪ್ರಭುತ್ವ ದೇಶಗಳ ಮೂಲ ತಾಯ್ನಾಡು. ಬಾಂಗ್ಲಾದೇಶದ ಪ್ರಧಾನಿ ಭಾರತದಲ್ಲಿ ಸುರಕ್ಷಿತ ಎಂದು ಭಾವಿಸಿ ಇಲ್ಲಿಗೆ ಆಗಮಿಸಿದ್ದಾರೆ. ಆದರೆ ಭಾರತದಲ್ಲೇ ವಾಸಿಸುವವರು ಹಿಂದೂ ರಾಷ್ಟ್ರ ಯಾಕೆ? ಏಕೆ ರಾಮರಾಜ್ಯ? ಎಂದು ಕೇಳುತ್ತಲೇ ಇರುತ್ತಾರೆ. ಈ ಪ್ರಶ್ನೆಗೆ ಈಗ ಸೂಕ್ತ ಉತ್ತರ ಸಿಕ್ಕಿದೆʼʼ ಎಂದು ಅವರು ಹೇಳಿದ್ದಾರೆ.
“ಮುಸ್ಲಿಂ ದೇಶಗಳಲ್ಲಿ ಯಾರೂ ಸುರಕ್ಷಿತರಲ್ಲ, ಸ್ವತಃ ಮುಸ್ಲಿಮರು ಕೂಡ. ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಬ್ರಿಟನ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆ ದುರದೃಷ್ಟಕರ. ರಾಮರಾಜ್ಯದಲ್ಲಿ ಬದುಕುತ್ತಿರುವುದು ನಮ್ಮ ಅದೃಷ್ಟ. ಜೈ ಶ್ರೀ ರಾಮ್ʼʼ ಎಂದು ಕಂಗನಾ ಬರೆದುಕೂಂಡಿದ್ದಾರೆ. ಸದ್ಯ ಈ ಹೇಳಿಕೆಗೆ ವಿರುದ್ಧ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.
Post a comment
Log in to write reviews