ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಜೊತೆಗೆ ಇನ್ನೊಂದು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣದ ಬಗ್ಗೆ (ಆಗಸ್ಟ್ 05) ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ನೇತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿತು.
ಸಭೆಯಲ್ಲಾದ ಚರ್ಚೆ ಬಗ್ಗೆ ಉಭಯ ನಾಯಕರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮೂರನೇ ಅತಿದೊಡ್ಡ ನಿಲ್ದಾಣವಾಗಿದೆ. ಮುಂಬೈ, ದೆಹಲಿ ಹೊರತುಪಡಿಸಿ ದಕ್ಷಿಣ ಭಾರತದಲ್ಲೇ ದೊಡ್ಡ ನಿಲ್ದಾಣವಾಗಿದ್ದು 70 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ 110 ಮಿಲಿಯನ್ ಗೆ ತಲುಪುತ್ತದೆ ಎಂದು ಅಂದಾಜಿಸಲಾಗಿದೆ” ಎಂದರು.
ಅತೀ ಶೀಘ್ರದಲ್ಲೇ ಎರಡನೇ ವಿಮಾನ ನಿಲ್ದಾಣ ಆಗಲಿದೆ. ಅದಕ್ಕಾಗಿ ಏಳು ಸ್ಥಳ ಗಮನಕ್ಕೆ ಇದ್ದು, ಈ ಬಗ್ಗೆ ಸಾಧಕ ಬಾಧಕ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಬೆಂಗಳೂರು ನಗರ ಹಾಗೂ ಕರ್ನಾಟಕದ ಜನರಿಗೆ ಅನುಕೂಲ ಆಗಬೇಕು. ರಾಜಕೀಯ ಬಿಟ್ಟು ಎಲ್ಲರಿಗೂ ಅನುಕೂಲ ಆಗುವಂತೆ ನಿರ್ಧಾರ ಕೈಗೊಳ್ಳುವ ಕೆಲಸ ಆಗಬೇಕು ಎಂದು ಹೇಳಿದರು.
ಅಂತಿಮವಾಗಿ ಕೇಂದ್ರ ಸರ್ಕಾರವೇ ಅನುಮತಿ ನೀಡಬೇಕು. ಕೇಂದ್ರ ತಂಡ ಸಾಧಕ-ಭಾದಕಗಳನ್ನು ಗಮನಿಸಿ ಹಾಗೂ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿ, ಯಾವ ಜಾಗದಲ್ಲಿ ವಿಮಾನ ನಿಲ್ದಾಣ ಬಂದರೆ ಸೂಕ್ತ, ಹಾಗೂ ಬೆಂಗಳೂರಿಗೆ ಹೇಗೆ ಅನುಕೂಲವಾಗುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.
150 ಕಿ.ಮೀ ವ್ಯಾಪ್ತಿಯಲ್ಲಿ ಎರಡೆರಡು ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಬಾರದು ಎನ್ನುವ ನಿಯಮವಿದ್ದು. ಈ ನಿಯಮ 2032- 33 ಕ್ಕೆ ಮುಗಿಯಲಿದೆ. ಪ್ರಸ್ತುತ ಎರಡು ರನ್ ವೇಗಳನ್ನು 4 ಸಾವಿರ ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡು ನಿರ್ಮಾಣ ಮಾಡಲಾಗಿತ್ತು. ಎರಡು ರನ್ ವೇ ಗಳು ಭವಿಷ್ಯದಲ್ಲಿ ಸಾಲುವುದಿಲ್ಲ. ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಜನ ಸಂಖ್ಯೆ ಹೆಚ್ಚಾದಂತೆ ಅವಶ್ಯಕತೆಗಳು ಹೆಚ್ಚಾಗುತ್ತಿವೆ. ಈ ಕಾರಣಕ್ಕೆ ಕೇವಲ ಒಂದು ವಿಮಾನ ನಿಲ್ದಾಣ ಸಾಕಾಗುವುದಿಲ್ಲ. ಸಚಿವರ ನೇತೃತ್ವದಲ್ಲಿ ಹತ್ತಾರು ಸಭೆಗಳು ನಡೆಸಲಾಗಿದೆ. ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಂದಷ್ಟು ನಿಯಮಗಳಿರುವ ಕಾರಣಕ್ಕೆ ಈಗಲೇ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ.
Post a comment
Log in to write reviews