ಒಕ್ಕಲಿಗರು ನನಗೆ ಮತ ಹಾಕಿಲ್ಲ : ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ ಲಕ್ಷ್ಮಣ್ ಅಸಮಾಧಾನ
ಮೈಸೂರು: ಮತ ಹಾಕಿದವರಿಗೆ ಸಾಷ್ಟಾಂಗ ನಮಸ್ಕಾರ. ಮತ ಹಾಕದವರಿಗೆ ಬರಿ ನಮಸ್ಕಾರ. ಸಿದ್ದರಾಮಯ್ಯಗೆ ಎದ್ದು ನಿಂತು ಸಾಷ್ಟಾಂಗ ನಮಸ್ಕಾರ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ ಲಕ್ಷ್ಮಣ್ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ವಿವಿಧ ಬಗೆಯಲ್ಲಿ ನಮಸ್ಕಾರ ಮಾಡಿದರು.
ಮೈಸೂರಿಗೆ ಕೊಡಗು ಕ್ಷೇತ್ರದಲ್ಲಿ 6.5 ಲಕ್ಷ ಜನ ಮತ ನೀಡಿದ್ದಾರೆ, 7.9ಲಕ್ಷ ಜನ ನನಗೆ ಮತ ನೀಡಿಲ್ಲ. ಇರುವವರಿಗೂ ಧನ್ಯವಾದ ಹೇಳಿದರು.
ಚುನಾವಣೆಯಲ್ಲಿ ನಾನು ಜನರಿಗೆ ಭರವಸೆ ನೀಡಿದ್ದೆ. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಹೇಳಿದ್ದೆ ಆದರೂ ನಾನು ಈ ಚುನಾವಣೆಯಲ್ಲಿ ಸೋಲನುಭವಿಸಿದ್ದೇನೆ ಹಾಗಂತ ನಾನು ಎಲ್ಲೂ ಓಡಿ ಹೋಗಲ್ಲ. ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದೆ. ಪ್ರಾಮಾಣಿಕವಾಗಿ ನಿಮ್ಮ ಜೊತೆ ಇದ್ದು ನಾನು ಕೆಲಸ ಮಾಡುತ್ತೇನೆ. ನನಗೆ ಸಿದ್ದರಾಮಯ್ಯನವರೇ ದೇವರು. ಸಿದ್ದರಾಮಯ್ಯನವರು ನನಗೆ ಟಿಕೆಟ್ ಕೊಟ್ಟರು, ಅದಕ್ಕೆ ಡಿಕೆ ಶಿವಕುಮಾರ್ ಕೂಡ ಸಹಕಾರ ನೀಡಿದ್ರು. ಎಂಟು ಕ್ಷೇತ್ರದ ಶಾಸಕ, ಮಾಜಿ ಶಾಸಕರು ನನಗೆ ಸಹಕಾರ ನೀಡಿದ್ದಾರೆ. ನನಗೆ ಅದೃಷ್ಟ ಇರಲಿಲ್ಲ, ನನ್ನ ಹಣೆಬರಹ ಸರಿ ಇರಲಿಲ್ಲ, ಹಾಗಾಗಿ ನಾನು ಸೋತಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತ ಪಡಿಸಿದರು.
ಕಾಂಗ್ರೆಸ್ ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ. ಚುನಾವಣೆ ವೇಳೆ ನನ್ನನ್ನ ಒಕ್ಕಲಿಗನೇ ಅಲ್ಲ ಅಂದು ಅಪಪ್ರಚಾರ ಮಾಡಿದರು. ಹಳೆ ಮೈಸೂರು ಭಾಗದಲ್ಲಿ 8 ಜನ ಒಕ್ಕಲಿಗರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು ಅದರಲ್ಲಿ ಒಬ್ಬ ಒಕ್ಕಲಿಗನನ್ನು ಮತದಾರ ಆಯ್ಕೆ ಮಾಡಿಕೊಳ್ಳಲಿಲ್ಲ. ಮೈಸೂರಿನಲ್ಲಿ ಹಲವು ವರ್ಷಗಳ ನಂತರ ಕಾಂಗ್ರಸ್ ಪಕ್ಷ ಒಕ್ಕಲಿಗೆ ಸಮುದಾಯಕ್ಕೆ ಟಿಕೆಟ್ ನೀಡಿತ್ತು ಈ ಅವಕಾಶವನ್ನ ಸಹ ನೀವು ಕೈ ಚೆಲ್ಲಿದ್ದೀರ ನಾವು ಏನು ಅನ್ಯಾಯ ಮಾಡಿದ್ದೇವೆ ಹೇಳಿ.
ಜೆಡಿಎಸ್ ಬಿಜೆಪಿಯಲ್ಲಿ ಇರುವವರು ಮಾತ್ರ ಒಕ್ಕಲಿಗರಾ ? ನಾವು ಒಕ್ಕಲಿಗರು ಅಂತ ಪ್ರೂವ್ ಮಾಡಲಿಕ್ಕೆ ಏನು ಮಾಡಬೇಕು ಹೇಳಿ. ಒಕ್ಕಲಿಗರು ನನಗೆ ಮತ ಹಾಕಿಲ್ಲ ಎಂದು ಮೈಸೂರು ಕೊಡಗು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಅಸಮಾಧಾನವನ್ನು ಹೊರ ಹಾಕಿದರು.
Post a comment
Log in to write reviews