ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ನೂತನವಾಗಿ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜಯಗಳಿಸಿದ ನಂತರ ಒಮರ್ ಅಬ್ದುಲ್ಲಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಶ್ರೀ ನಗರ ಶೇರ್ ಎ ಕಾಶ್ಮೀರ ಇಂಟರ್ ನ್ಯಾಷನಲ್ ಕನ್ವೆಂಶನಲ್ ಸೆಂಟರ್‌ನಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ. ಕಾಂಗ್ರೆಸ್ ಪಕ್ಷ ಒಮರ್ ಅಬ್ದುಲ್ಲಾ ಸಂಪುಟದ ಭಾಗವಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಒಮರ್ ಅಬ್ದುಲ್ಲಾ ಮತ್ತು ಅವರ ಸಚಿವರಿಗೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಮನೋಜ್ ಸಿನ್ಹಾ ಅವರು ಪ್ರಮಾಣವಚನ ಬೋಧಿಸಿದ್ದಾರೆ.
ಜಾವೇದ್ ಅಹ್ಮದ್ ರಾಣಾ, ಜಾವೇದ್ ದಾರ್, ಸುರೇಂದ್ರ ಚೌಧರಿ, ಸಕೀನಾ, ಸತೀಶ್ ರ‍್ಮಾ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ.
90 ಸ್ಥಾನಗಳ ಪೈಕಿ ನ್ಯಾಷನಲ್ ಕಾನ್ಫರೆನ್ಸ್ 42 ಮತ್ತು ಕಾಂಗ್ರೆಸ್ 6 ವಿಧಾನಸಭಾ ಸ್ಥಾನಗಳನ್ನು ಗೆದ್ದಿವೆ. ಅದೇ ಸಮಯದಲ್ಲಿ ಬಿಜೆಪಿ 29 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
Post a comment
Log in to write reviews