ಕುಶಿನಗರ: ಮುಂಬರುವ ದಿನಗಳಲ್ಲಿ 'ಒಂದು ರಾಷ್ಟ್ರ ಒಂದು ಚುನಾವಣೆ ವ್ಯವಸ್ಥೆ' ಜಾರಿಗೆ ತರಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ಮಾತನಾಡಿದ ಅವರು, ದೇಶದಾದ್ಯಂತ ಏಕಕಾಲದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ನಡೆಸುವುದು ಒಳ್ಳೆಯದು ಎಂದು ಬಿಜೆಪಿ ನಂಬಿಕೆ ಹೊಂದಿದೆ. ಇದರಿಂದ ಆರ್ಥಿಕ ಸಂಪನ್ಮೂಲ ಉಳಿಸಲು ನೆರವಾಗಲಿದೆ ಎಂದರು.
ಭಾರತ ಈಗ ವಿಶ್ವದ 5ನೇ ಆರ್ಥಿಕ ಮಹಾಶಕ್ತಿಯಾಗಿ ಹೊರಹೊಮ್ಮಿದೆ. ನಂತರ ಮೋದಿಯವರ ಮೂರನೇ ಅವಧಿಯಲ್ಲಿಭಾರತವು 2027ರ ಹೊತ್ತಿಗೆ ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಲಿದೆ. 2047ರ ಹೊತ್ತಿಗೆ ಭಾರತ ವಿಶ್ವದ ಅತಿ ದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರವಾಗಲಿದೆ ಎಂದು ಸಿಂಗ್ ಭರವಸೆ ವ್ಯಕ್ತಪಡಿಸಿದರು.
ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸುವುದು ಸೂಕ್ತ ಎಂದು ಸಂಸದೀಯ ಸಮಿತಿಯೊಂದು ಈ ಹಿಂದೆ ಶಿಫಾರಸು ಮಾಡಿತ್ತು. ದೇಶದಲ್ಲಿ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯುತ್ತಿರುವ ವ್ಯವಸ್ಥೆ ಉತ್ತಮವಾಗಿಲ್ಲ. ಇದರಿಂದ ಅಪಾರ ಸಮಯ, ಹಣ ಖರ್ಚು ಆಗುತ್ತಿದೆ ಎಂದಿತ್ತು.
Post a comment
Log in to write reviews