ರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿರುವ ಘಟನೆ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.
ಮೃತ ಕಾರ್ಮಿಕ 48 ವರ್ಷದ ಮೌನೇಶ್, ಹಟ್ಟಿ ಚಿನ್ನದ ಗಣಿಯ ಶಾಫ್ಟ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ಕಂಪನಿಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ (ಜುಲೈ 11)ರ ರಾತ್ರಿ ಪಾಳಿಯಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಿದ್ದರು. ಭೂಮಿಯ ಕೆಳಮೈ ವಿಭಾಗದಲ್ಲಿ ಕಾರ್ಯ ನಿರ್ವಹಿಸುವಾಗ ಭೂಕುಸಿತವಾಗಿ ಈ ದುರ್ಘಟನೆ ಸಂಭವಿಸಿದೆ. ಚಿನ್ನ ತೆಗೆಯುವ ಮುನ್ನ ಕೆಳಮೈನಲ್ಲಿ ನಿರಂತರ ಏರ್ ಬ್ಲಾಸ್ಟ್ ಮಾಡುವ ವೇಳೆ ಇಂತಹ ದುರ್ಘಟನೆಗಳು ಸಂಭವಿಸುತ್ತವೆ. ಆದರೂ ಕಂಪನಿ. ಕಾರ್ಮಿಕರಿಗೆ ರಕ್ಷಣೆ ನೀಡದೇ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಮೃತ ಕಾರ್ಮಿಕನ ಕುಟುಂಬಕ್ಕೆ ಕಂಪನಿ 50 ಲಕ್ಷ ರೂ. ಪರಿಹಾರ ಘೋಷಿಸುವಂತೆ ಮೃತನ ಸಂಬಂಧಿಕರು, ಕಾರ್ಮಿಕ ಸಂಘಟನೆಗಳ ಮುಖಂಡರು ಒತ್ತಾಯಿಸಿದರು .
ಗಣಿ ಕಂಪನಿ ಆಸ್ಪತ್ರೆ ಕಾರ್ಯನಿರ್ವಾಹಕ ನಿರ್ದೇಶಕ, ಪ್ರಧಾನ ವ್ಯವಸ್ಥಾಪಕ ಹಾಗೂ ಉಪ ಪ್ರಧಾನ ವ್ಯವಸ್ಥಾಪಕ, ಅಧಿಕಾರಿಗಳು, ಕಾರ್ಮಿಕ ಸಂಘದ ಮುಖಂಡರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
Post a comment
Log in to write reviews