ದೀಪಾವಳಿ ಹಬ್ಬದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ಪಟಾಕಿಗಳನ್ನು ಮಾತ್ರ ಬಳಸಲು ಆದೇಶಿಸಿದ್ದಾರೆ. ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಯಾವುದೇ ಪಟಾಕಿ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳ ಜತೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಲೋಪ ಆಗಬಾರದು. ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ಈ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಈ ಕುರಿತು ಡಿಸಿಗಳು, ಎಸ್ಪಿಗಳಿಗೆ ಸೂಚನೆ ನೀಡಿದ್ದೇನೆ. ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಅಧಿಕಾರಿಗಳು ಪಟಾಕಿ ದಾಸ್ತಾನುಗಳ ಪರಿಶೀಲನೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಬಾರದು. ನಿಯಮ ಮೀರಿದರೇ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.
Post a comment
Log in to write reviews