ರಾಜ್ಯದ ಬೀಚ್‌ಗಳಿಗೆ ಪ್ರವಾಸಿಗರನ್ನು ಸೆಳೆಯುವ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಲಾಭದಾಯಕವನ್ನಾಗಿಸುವ ಉದ್ದೇಶದೊಂದಿಗೆ ಮಹತ್ವದ ಕ್ರಮಕ್ಕೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ರಾಜ್ಯದ ಕರಾವಳಿಯ ಬೀಚ್‌ಗಳಲ್ಲಿ ಕೂಡ ಗೋವಾದ ಮಾದರಿಯಲ್ಲಿ ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
ರಾಜ್ಯದ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್‌ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಇನ್ನೂ ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ನಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ, ಬೀಚ್‌ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು. ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಅನಿರ್ವಾಯವಾಗಿದೆ. ಬೀಚ್‌ಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು, ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲತೀರಗಳಲ್ಲಿ ಹೆಚ್ಚಿನ ಲೈಟ್‌ಗಳನ್ನು ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಟೆಂಟ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಡಲ ತೀರಗಳ ಬಳಿ ಸರ್ಕಾರಿ ಮತ್ತು ಖಾಸಗಿ ಜಮೀನುಗಳನ್ನು ಹುಡುಕುವಂತೆ ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
Post a comment
Log in to write reviews