Samayanews.

Samayanews.

2024-12-23 11:22:28

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಾಮುಕ ಶಿಕ್ಷಕನ ಮೊಬೈಲಲ್ಲಿ 5000ಕ್ಕೂ ಹೆಚ್ಚು ಹೆಣ್ಮಕ್ಕಳ ನಗ್ನ ದೃಶ್ಯಗಳು!

ಬೆಂಗಳೂರು:  ಕೋಲಾರ ಜಿಲ್ಲೆಯ ಶಾಲೆಯೊಂದರಲ್ಲಿ ಬಾಲಕಿಯರು ಬಟ್ಟೆ ಬದಲಿಸುವ ಸಮಯದ 5000ಕ್ಕೂ ಹೆಚ್ಚು ಪೋಟೋ ಹಾಗೂ ನೂರಾರು ವಿಡಿಯೋ ಸೆರೆಹಿಡಿದ ಆರೋಪದ ಮೇಲೆ ಪೋಕೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿಯಲ್ಲಿ ಚಿತ್ರಕಲಾ ಶಿಕ್ಷಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಚಿತ್ರಕಲಾ ಶಿಕ್ಷಕ ಮುನಿಯಪ್ಪ (46) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಸಾರಾಸಗಟಾಗಿ ತಿರಸ್ಕರಿಸಿ, ಶಿಕ್ಷಕನ ಕೃತ್ಯವು ನಿಜಕ್ಕೂ ಅಸಭ್ಯ ಹಾಗೂ ಭಯಾನಕವಾಗಿದೆ. ಇಂತಹ ಪ್ರಕರಣವನ್ನು ರದ್ದುಪಡಿಸಲಾಗದು ಎಂದಿದೆ. ಪೋಕೋ ಕಾಯ್ದೆ ಸೆಕ್ಷನ್ 11 ಪ್ರಕಾರ, ಮಕ್ಕಳ ದೇಹ ಅಥವಾ ದೇಹದ ಯಾವುದೇ ಭಾಗವನ್ನು ಅಸಭ್ಯ ರೀತಿಯಲ್ಲಿ ಪ್ರದರ್ಶಿಸುವುದು ಲೈಂಗಿಕ ಕಿರುಕುಳವಾಗುತ್ತದೆ. ಈ ಅಪರಾಧವು ಕಾಯ್ದೆಯ ಸೆಕ್ಷನ್ 12ರಡಿ ಶಿಕ್ಷಾರ್ಹವಾಗಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕನಾಗಿ ಮುನಿಯಪ್ಪ ನೇಮಕಗೊಂಡಿದ್ದರು. ಈಗಲೂ ಅದೇ ಹುದ್ದೆಯಲ್ಲಿದ್ದಾರೆ. ವಸತಿ ಶಾಲೆಯಲ್ಲಿ ಬಟ್ಟೆ ಬದಲಿಸುವ ಸಮಯದಲ್ಲಿ ಬಾಲಕಿಯರ ಚಿತ್ರ ಹಾಗೂ ವಿಡಿಯೋವನ್ನು ತೆಗೆದ ಆರೋಪದ ಮೇಲೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ನಿಯಂತ್ರಣ ಕೊಠಡಿ ಮೂಲಕ ದೂರು ಸ್ವೀಕರಿಸಿದ್ದರು. ನಂತರ ಮಾಸ್ತಿ ಪೊಲೀಸ್ ಠಾಣೆಯಲ್ಲಿ  ಅರ್ಜಿದಾರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಎಫ್‌ಐಆ‌ರ್ ಕುರಿತ ಕೋಲಾರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಪೋಕ್ಲೋ ವಿಶೇಷ ಕೋರ್ಟ್)ದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಮುನಿಯಪ್ಪ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರ ಐದು ಮೊಬೈಲ್ ಫೋನ್ ಹೊಂದಿದ್ದಾರೆ. ಇಷ್ಟು ಮೊಬೈಲ್‌ಗಳನ್ನು ಓರ್ವ ಚಿತ್ರಕಲಾ ಶಿಕ್ಷಕ ಏಕೆ ಹೊಂದಿದ್ದ? ಆ ವಿಡಿಯೋ ಹಾಗೂ ಚಿತ್ರಗಳು ಯಾವುವು? ಎಂಬುದು ಪೂರ್ಣ ಪ್ರಮಾಣದ ತನಿಖೆ ಮತ್ತು ವಿಚಾರಣೆಯಿಂದ ಬಹಿರಂಗವಾಗಬೇಕಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಅರ್ಜಿದಾರ ಪೂರ್ಣ ಪ್ರಮಾಣದ ವಿಚಾರಣೆಯಿಂದ ಆರೋಪಮುಕ್ತವಾಗಿ ಬರಲಿ. ಅದು ಬಿಟ್ಟು ಈ ಹಂತದಲ್ಲಿ ಪ್ರಕರಣ ರದ್ದುಪಡಿಸಿದರೆ ಶಿಕ್ಷಕನ ಅಕ್ರಮ ಚಟುವಟಿಕೆಗಳನ್ನು ಉತ್ತೇಜಿಸಿದಂತಾಗುತ್ತದೆ ಎಂದು ತೀಕ್ಷ್ಮವಾಗಿ ನುಡಿದ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿದೆ. 

img
Author

Post a comment

No Reviews