ಇಸ್ಲಾಮಾಬಾದ್: ದ್ವಿಪಕ್ಷೀಯ ಬಾಂಧವ್ಯ ಮತ್ತಷ್ಟು ಬಲಪಡಿಸಿಕೊಳ್ಳಲು ಪಾಕಿಸ್ತಾನದ ಪ್ರಧಾನಿ ಮಂಗಳವಾರ ಚೀನಾಕ್ಕೆ ಆಗಮಿಸಲಿದ್ದಾರೆ.
ನೆರೆ ದೇಶದೊಂದಿಗೆ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮಂಗಳವಾರ ಚೀನಾಕ್ಕೆ ಐದು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಪಾಕ್ ವಿದೇಶಾಂಗ ಕಚೇರಿ ಶುಕ್ರವಾರ ಹೇಳಿದೆ.
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಷರೀಫ್ ಜೂನ್ 4 ರಿಂದ 8 ರವರೆಗೆ ಚೀನಾದಲ್ಲಿ ತೆರಳಲಿದ್ದಾರೆ. ಈ ಭೇಟಿಯು ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (CPEC) ಯೋಜನೆಯಡಿಯಲ್ಲಿ ಸಹಕಾರ ಹೆಚ್ಚಿಸುವ ಗುರಿಯನ್ನು ಹೊಂದಿದೆ. ಮಿತ್ರರಾಷ್ಟ್ರಗಳು ಬಹು ಶತಕೋಟಿ ಡಾಲರ್ ವ್ಯವಹಾರದ ಅಡಿಯಲ್ಲಿ ಸಹಕಾರ ನವೀಕರಿಸಲು ಪ್ರಯತ್ನಿಸುತ್ತಿದ್ದು ಈ ಭೇಟಿ ಮಹತ್ವ ಪಡೆದುಕೊಂಡಿದೆ.
Post a comment
Log in to write reviews