ಫ್ಲೋರಿಡಾ: ಟಿ 20 ವಿಶ್ವ ಕಪ್ ನಲ್ಲಿ ಪಾಕಿಸ್ತಾನ ಐರ್ಲೆಂಡ್ ತಂಡವನ್ನು 3 ವಿಕೆಟ್‌ಗಳಿಂದ ಮಣಿಸಿದೆ.
ಫ್ಲೋರಿಡಾದಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ 19ನೇ ಓವರ್‌ನಲ್ಲಿ ಗೆಲುವಿನ ದಡ ಮುಟ್ಟಿತು. ವಾಸ್ತವವಾಗಿ ಲೀಗ್ ಸುತ್ತಿನ ಮೊದಲ ಎರಡು ಪಂದ್ಯ ಸೋತಿದ್ದ ಪಾಕಿಸ್ತಾನ ತಂಡ ಆರಂಭದಲ್ಲೇ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿತ್ತು. ಹೀಗಾಗಿ ಔಪಚಾರಿಕ ಪಂದ್ಯವನ್ನಾಡಿದ ಬಾಬರ್ ಪಡೆ, ಈ ಪಂದ್ಯದಲ್ಲೂ ಪ್ರಯಾಸದ ಗೆಲುವು ದಾಖಲಿಸಿದೆ.
ಟಿ 20 ವಿಶ್ವಕಪ್‌ನಿಂದ ಪಾಕ್ ಔಟ್
ನಾಯಕ ಬಾಬರ್ ಬ್ಯಾಟಿಂಗ್ ನಲ್ಲಿ ಅಬ್ಬರಿಸಿ 34 ಎಸೆತಗಳಲ್ಲಿ ಎರಡು ಬೌಂಡರಿಗಳ ನೆರವಿನಿಂದ 32 ರನ್ ಗಳಿಸಿ ಅಜೇಯರಾಗಿ ಉಳಿದರು. ಅದೇ ಸಮಯದಲ್ಲಿ, ಶಾಹೀನ್ ಅಫ್ರಿದಿ ಐದು ಎಸೆತಗಳಲ್ಲಿ ಎರಡು ಸಿಕ್ಸರ್‌ಗಳ ಸಹಾಯದಿಂದ 13 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಅಬ್ಬಾಸ್ 21 ಎಸೆತಗಳಲ್ಲಿ 17 ರನ್ ಬಾರಿಸಿದರು. ಈ ಗೆಲುವಿನೊಂದಿಗೆ ಪಾಕಿಸ್ತಾನ ತಂಡ ಎ ಗುಂಪಿನಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. ಹೀಗಾಗಿ ಭಾರತ ಮತ್ತು ಅಮೆರಿಕ ತಂಡಗಳು ಎ ಗುಂಪಿನಿಂದ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿವೆ.
Post a comment
Log in to write reviews