ರೆಸ್ಟೋರೆಂಟ್ ಪರವಾನಗಿ ನವೀಕರಿಸಲು ಪಿಡಿಒ 5 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟು 3.50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಘಟನೆ ದೊಡ್ಡಬಳ್ಳಾಪುರದ ಅರಳುಮಲ್ಲಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ರೆಸ್ಟೋರೆಂಟ್ ಪರವಾನಗಿ ನವೀಕರಿಸಲು ಪಿಡಿಒ 5 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟು 3.50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಘಟನೆ ದೊಡ್ಡಬಳ್ಳಾಪುರದ ಅರಳುಮಲ್ಲಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ಹೊಂದಿರುವ ನರಸಿಂಹಮೂರ್ತಿ ಎಂಬುವವರು ಲೈಸನ್ಸ್ ನವೀಕರಣಕ್ಕೆ ಪಿಡಿಒ ಬಳಿ ಹೋಗಿದ್ದರು. ಪರವಾನಗಿ ನವೀಕರಿಸಿಕೊಡಲು 5 ಲಕ್ಷ ಲಂಚದ ಹಣಕ್ಕೆ ಪಿಡಿಒ ಬೇಡಿಕೆ ಇಟ್ಟಿದ್ದರು. ಇಬ್ಬರ ನಡುವೆ ಹಣದ ವಿಚಾರಕ್ಕೆ ಮಾತುಕತೆ ನಡೆದು 3.5 ಲಕ್ಷ ಕೊಡುವುದಾಗಿ ಅರ್ಜಿದಾರರಾದ ನರಸಿಂಹಮೂರ್ತಿ ಒಪ್ಪಿಕೊಂಡಿದ್ದರು
ಆದರೆ, ನರಸಿಂಹಮೂರ್ತಿ ಲಂಚದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಕಳೆದ ಮಂಗಳವಾರ ಪಿಡಿಒ ನಿರಂಜನ್ ಅವರು ದೊಡ್ಡಬಳ್ಳಾಪುರ ತಾಲೂಕು ಪಂಚಾಯತ್ ಆವರಣದಲ್ಲಿರುವ ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕರ ಕೊಠಡಿಯಲ್ಲಿ 3.50 ಲಕ್ಷ ರೂಪಾಯಿ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
Tags:
- lokayukta
- lokayukta raid
- lokayukta raids
- lokayukta raid today
- lokayukta raid today news
- lokayukta raid news
- rewa lokayukta raid
- karnataka lokayukta
- lokayukta raids over karnataka
- mp lokayukta raids
- lokayukta raid in bengaluru
- lokayukta police raid
- lokayukta raids underway in karnataka
- lokayukta raid in doddaballapura
- lokayukta raid in kolar
- lokayukta raid on govt officials
- lokayukta raid in karnataka
- lokayukta raids in karnataka
- karnataka lokayukta yaru
Post a comment
Log in to write reviews