ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಸಿ ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಂತೆ ಆಗಿದೆ ಎಂದು ಕಿಡಿ ಕಾರಿದ್ದಾರೆ.
ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9%) ಹೆಚ್ಚಳವಾಗಿದೆ. ಅಂತೆಯೇ ಡಿಸೇಲ್ ಈ ಹಿಂದೆ- 14.34% ಇದ್ದದ್ದು, ಈಗ (18.44%) 4.1% ರಷ್ಟು ಏರಿಕೆ ಆಗಿದೆ.
ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಿಡಿದೆದ್ದಿದ್ದು ಜೂನ್.17ರಂದು ರಾಜ್ಯಾಧ್ಯಂತ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಪ್ರತಿಭಟನೆ ನಡೆಸೋದಕ್ಕೆ ನಿರ್ಧಾರ ಕೈಗೊಂಡಿರೋದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
Post a comment
Log in to write reviews