ಸುಮಾರು 200 ಜನರಿದ್ದ ಏರ್ ಇಂಡಿಯಾ ವಿಮಾನ ರನ್‌ವೇಯಲ್ಲಿ ಲಗ್ಗೇಜ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಗುರುವಾರ ಪುಣೆಯ ವಿಮಾನನಿಲ್ದಾಣದಲ್ಲಿ ನಡೆದಿದೆ.
ಲಗ್ಗೇಜ್ ಟ್ರ್ಯಾಕ್ಟರ್‌ಗೆ ಡಿಕ್ಕಿಯಾದ ಹಿನ್ನೆಲೆ ವಿಮಾನದ ಒಂದು ಭಾಗದ ರೆಕ್ಕೆ ಮತ್ತು ಚಕ್ರಕ್ಕೆ ಹಾನಿಯುಂಟಾಗಿದೆ. ಈ ಅವಘಡ ಸಂಭವಿಸಿದಾಗ ಬರೋಬ್ಬರಿ 180 ಪ್ರಯಾಣಿಕರು ವಿಮಾನದಲ್ಲಿದ್ದರು. ಸಿಬ್ಬಂದಿ ಸೇರಿದಂತೆ 200 ಜನರು ವಿಮಾನದಲ್ಲಿದ್ದರು, ಈ ವಿಮಾನ ಪುಣೆಯಿಂದ ದೆಹಲಿಯತ್ತ ಹೊರಟಿತ್ತು.
ಈ ಅವಘಡದಲ್ಲಿ ಸಿಬ್ಬಂದಿ ಸೇರಿದಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಯಾರಿಗೂ ಯಾವುದೇ ಅಪಾಯ ಆಗಿಲ್ಲ. ಕೂಡಲೇ ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಕೆಳಗೆ ಇಳಿಸಲಾಯ್ತು ಎಂದು ಏರ್ ಇಂಡಿಯಾ ಅಧಿಕೃತ ಹೇಳಿಕೆಯನ್ನು ನೀಡಿದೆ.
ಘಟನೆ ಸಂಬಂಧ ತನಿಖೆಗೆ ಆದೇಶ
ಏರ್ ಇಂಡಿಯಾ ಎಐ-858 ಸಂಜೆ ನಾಲ್ಕು ಗಂಟೆಗೆ ಪುಣೆಯಿಂದ ದೆಹಲಿಗೆ ತೆರಳಬೇಕಿತ್ತು. ಆದರೆ ರನ್‌ವೇನಲ್ಲಿ ಲಗ್ಗೇಜ್ ಟ್ರಾಕ್ಟರ್ ಡಿಕ್ಕಿಯಾದ ಪರಿಣಾಮ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಯ್ತು. ಈ ಅವಘಡ ಸಂಬಂಧ ಡಿಜಿಸಿಎ ತನಿಖೆಗೆ ಆದೇಶಿಸಿದೆ. ಸುರಕ್ಷತಾ ದೃಷ್ಟಿ ಹಿನ್ನೆಲೆ ಅಪಘಾತಕ್ಕೀಡಾದ ವಿಮಾನದ ಹಾರಾಟವನ್ನು ರದ್ದುಗೊಳಿಸಲಾಗಿದೆ.
Post a comment
Log in to write reviews