ಈ ಹಿಂದೆ ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ಗಿಂತ ಒಂದು ಸ್ಥಾನ ಹೆಚ್ಚು ಗೆದ್ದರೂ ನಾನು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ 12 ಸಾವಿರಕ್ಕೂ ಹೆಚ್ಚು ಮತ ಪಡೆದು ಗೆದ್ದಿದ್ದಾರೆ . ಕಾರಣ ಈಬಾರಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ನೀಡಲಿದ್ದಾರ ಎಂಬ ಕುತೂಹಲ ಎಲ್ಲೆಡೆ ಮೂಡಿದೆ. ಅಷ್ಟೇ ಅಲ್ಲದೆ ಬಿಜೆಪಿ ಕಾರ್ಯಕಾರ್ತರು ಸಹ ಪ್ರದೀಪ್ ಈಶ್ವರ್ ಅವರು. ರಾಜೀನಾಮೆ ನೀಡುವಂತೆ ಒತ್ತಡ ಹೇರುತ್ತಿದ್ದಾರೆ. ಈ ಮದ್ಯೆ ಪ್ರದೀಪ್ ಈಶ್ವರ್ ಟ್ವಿಸ್ಟ್ ನೀಡಿದ್ದು ಅದರ ಪ್ರಕಾರ ತನ್ನ ಸವಾಲನ್ನ ಡಾ ಸುಧಾಕರ್ ಸ್ವೀಕರಿಸಿದ್ದರೆ ಮಾತ್ರ ನಾನು ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಆದರೆ ಪ್ರದೀಪ್ ಈಶ್ವರ್ ಸವಾಲಿಗೆ ಡಾ. ಸುಧಾಕರ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ
Post a comment
Log in to write reviews